ಸಿಗರೇಟ್‌ ಸೇದೋದ್ರಿಂದ ಹೃದಯಾಘಾತದ ಸಾಧ್ಯತೆ ಹೆಚ್ಚಾಗುತ್ತಾ ?

ಧೂಮಪಾನ ಆರೋಗ್ಯಕ್ಕೆ ಹಾನಿಕಾರಕ ಅನ್ನೋದು ಹಲವರಿಗೆ ತಿಳಿದಿದೆ. ತಂಬಾಕು ಸೇವನೆಯು ಶ್ವಾಸಕೋಶದ ಕ್ಯಾನ್ಸರ್ ಮತ್ತು ಉಸಿರಾಟದ ಕಾಯಿಲೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಆದ್ರೆ ಹೆಚ್ಚು ಸ್ಮೋಕ್ ಮಾಡೋದ್ರಿಂದ ಹಾರ್ಟ್ ಅಟ್ಯಾಕ್ ಸಾಧ್ಯತೆ ಹೆಚ್ಚಾಗುತ್ತೆ ಅನ್ನೋದು ನಿಮಗೆ ಗೊತ್ತಿದ್ಯಾ?

First Published May 11, 2023, 4:37 PM IST | Last Updated May 11, 2023, 4:42 PM IST

ಸಿಗರೇಟು ಸೇದುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಅಂತ ಗೊತ್ತಿದ್ರೂ ದೇಶದಲ್ಲಿ ಸಿಗರೇಟು ಮತ್ತು ಅಲ್ಕೋಹಾಲ್ ಸೇವನೆ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಸ್ಮೋಕಿಂಗ್ ಶ್ವಾಸಕೋಶ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗೂ ಕಾರಣವಾಗುತ್ತದೆ. ವಯಸ್ಕರು ಧೂಮಪಾನಕ್ಕೆ ಒಡ್ಡಿಕೊಳ್ಳುವುದರಿಂದ ಹೃದಯರಕ್ತನಾಳದ ಕಾಯಿಲೆ, ಪರಿಧಮನಿಯ ಹೃದಯ ಕಾಯಿಲೆ ಮತ್ತು ಶ್ವಾಸಕೋಶದ ಕ್ಯಾನ್ಸರ್ ಉಂಟಾಗುತ್ತದೆ. ಹಾಗೆಯೇ ಧೂಮಪಾನ ಮಾಡೋದ್ರಿಂದ ಹೃದಯಾಘಾತದ ಸಾಧ್ಯತೆ ಹೆಚ್ಚಾಗುತ್ತೆ ಅಂತಾರೆ. ಇದು ಎಷ್ಟರ ಮಟ್ಟಿಗೆ ನಿಜ. ಈ ಬಗ್ಗೆ ಕಾರ್ಡಿಯಾಕ್ ಸರ್ಜನ್‌ ಡಾ.ರಾಜೇಶ್ ಮಾಹಿತಿ ನೀಡಿದ್ದಾರೆ.

ಹಠಾತ್ ಹಾರ್ಟ್ ಅಟ್ಯಾಕ್ ಆದಾಗ ಏನ್ ಮಾಡ್ಬೇಕು?