ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆಯ ಘಟಕ ಆರಂಭವಾಗುವುದು ಯಾವಾಗ?

ಬೆಂಗಳೂರಿನ ಜಯದೇವ ಆಸ್ಪತ್ರೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವುದಕ್ಕೆ ಹೆಸರುವಾಸಿಯಾಗಿದೆ. ರಾಜ್ಯದ ವಿವಿಧೆಡೆಯಿಂದ ಜನರು ಇಲ್ಲಿಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಾರೆ. ಸದ್ಯ ಜಯದೇವ ಆಸ್ಪತ್ರೆ ಹುಬ್ಬಳ್ಳಿಯಲ್ಲೂ ಘಟಕ ಆರಂಭಿಸಲು ಮುಂದಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

First Published Mar 15, 2023, 2:50 PM IST | Last Updated Mar 15, 2023, 2:50 PM IST

ಸಾಮಾನ್ಯವಾಗಿ ರಾಜ್ಯದ ವಿವಿಧೆಡೆಯಿಂದ ಜನರು ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಬರುತ್ತಾರೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಯದೇವ ಆಸ್ಪತ್ರೆಯ ಘಟಕಗಳನ್ನು ತೆರೆಯಲಾಗಿದೆ. ಸದ್ಯ ಹುಬ್ಬಳ್ಳಿಯಲ್ಲೂ ಜಯದೇವ ಆಸ್ಪತ್ರೆಯ ಘಟಕವನ್ನು ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಈ ಬಗ್ಗೆ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಮಾಹಿತಿ ನೀಡಿದ್ದಾರೆ. '430 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಹುಬ್ಬಳ್ಳಿಯಲ್ಲಿ ಆರಂಭಿಸಲು ಒಂಭತ್ತೂವರೆ ಎಕರೆ ಜಮೀನು ಈಗಾಗಲೇ ವರ್ಗಾವಣೆಯಾಗಿದೆ. ಇನ್ನೊಂದು ಎರಡು ತಿಂಗಳಲ್ಲಿ ಶಂಕುಸ್ಥಾಪನೆ ಮಾಡಲಾಗುವುದು.ಮೂರು ವರ್ಷದಲ್ಲಿ ಘಟಕ ಆರಂಭಿಸಲಾಗುವುದು' ಎಂದು ತಿಳಿಸಿದ್ದಾರೆ.

ಮಕ್ಕಳಿಗೆ ಓಪನ್ ಹಾರ್ಟ್‌ ಸರ್ಜರಿ ಮಾಡೋದು ತುಂಬಾ ರಿಸ್ಕ್‌-ಡಾ.ಸಿ.ಎನ್ ಮಂಜುನಾಥ್

Video Top Stories