Asianet Suvarna News Asianet Suvarna News

ಬ್ರೈನ್‌ ಸ್ಟ್ರೋಕ್‌ನಿಂದ ಏನೆಲ್ಲಾ ತೊಂದ್ರೆಯಾಗುತ್ತೆ?

ಭಾರತದಲ್ಲಿ ಸ್ಟ್ರೋಕ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅಲ್ಲದೇ ಇದು ಗಂಭೀರ ಆರೋಗ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ವಿಶೇಷವಾಗಿ ವಯಸ್ಸಾದವರಲ್ಲಿ, ಇದರ ಅಪಾಯ ಹೆಚ್ಚು. ಬ್ರೈನ್‌ ಸ್ಟ್ರೋಕ್ ಆದಾಗ ಏನಾಗುತ್ತೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಸಾವು ಮತ್ತು ಅಂಗವೈಕಲ್ಯಕ್ಕೆ ಪ್ರಮುಖ ಕಾರಣಗಳಲ್ಲಿ ಸ್ಟ್ರೋಕ್ ಕೂಡ ಒಂದಾಗಿದೆ. ವರ್ಷದಲ್ಲಿ ಬರೋಬ್ಬರಿ1.8 ದಶಲಕ್ಷಕ್ಕೂ ಹೆಚ್ಚು ಜನರು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ಪಾರ್ಶ್ವವಾಯು ಅಥವಾ ಸ್ಟ್ರೋಕ್ ಪ್ರಕರಣಗಳು ಹೆಚ್ಚುತ್ತಲಿವೆ. ಅದರಲ್ಲೂ ವಯಸ್ಸಾದವರಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅದರಲ್ಲೂ ಬ್ರೈನ್‌ ಸ್ಟ್ರೋಕ್‌ನಿಂದ ಮೆದುಳಿನ ರಕ್ತ ಸಂಚಾರದಲ್ಲಿ ತೊಂದರೆಯಾಗುತ್ತದೆ. ಮೆದುಳಿನಲ್ಲಿ ನರವನ್ನು ನಿರ್ಬಂಧಿಸಿದಾಗ, ಬ್ರೈನ್ ಸ್ಟ್ರೋಕ್ ಉಂಟಾಗುತ್ತೆ. ಇದು ಮಾರಣಾಂತಿಕ ಸ್ಥಿತಿಯಾಗಿದ್ದು, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ಸಾವು ಸಂಭವಿಸಬಹುದು.  ಈ ಬಗ್ಗೆ ಮಣಿಪಾಲ್ ಆಸ್ಪತ್ರೆಯ ನರರೋಗ ತಜ್ಞ.ಡಾ.ಜಯಚಂದ್ರನ್‌ ಮಾಹಿತಿ ನೀಡಿದ್ದಾರೆ.

ಹೆಚ್ಚು ಉಪ್ಪು ತಿನ್ನೋ ಅಭ್ಯಾಸದಿಂದ ಕಾಡುತ್ತೆ ಬ್ರೈನ್ ಸ್ಟ್ರೋಕ್

Video Top Stories