India@75:ಪೋರ್ಚುಗೀಸರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕ ವೀರಗಾಥೆ

16ನೇ ಶತಮಾನದ ದ್ವಿತೀಯಾರ್ಧದಲ್ಲಿ ಉಳ್ಳಾಲದಲ್ಲಿ ಪರಂಗಿಯರ ಜೊತೆ ಹೋರಾಟ ನಡೆಸುವ ಮೂಲಕ ವಸಾಹತುಶಾಹಿಗಳ ವಿರುದ್ಧ ಹೋರಾಡಿದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಎಂಬ ಹೆಗ್ಗಳಿಕೆಗೆ ವೀರರಾಣಿ ಅಬ್ಬಕ್ಕ ಪಾತ್ರರಾಗುತ್ತಾರೆ.

Share this Video
  • FB
  • Linkdin
  • Whatsapp

16ನೇ ಶತಮಾನದ ದ್ವಿತೀಯಾರ್ಧದಲ್ಲಿ ಉಳ್ಳಾಲದಲ್ಲಿ ಪರಂಗಿಯರ ಜೊತೆ ಹೋರಾಟ ನಡೆಸುವ ಮೂಲಕ ವಸಾಹತುಶಾಹಿಗಳ ವಿರುದ್ಧ ಹೋರಾಡಿದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಎಂಬ ಹೆಗ್ಗಳಿಕೆಗೆ ವೀರರಾಣಿ ಅಬ್ಬಕ್ಕ ಪಾತ್ರರಾಗುತ್ತಾರೆ.

India@75: ಬ್ರಿಟಿಷರ ವಿರುದ್ಧ ಹೋರಾಡಿದ ಅಯೋಧ್ಯೆಯ ಹಿಂದೂ ಮುಸ್ಲಿಮರು

ಸುಮಾರು 3000 ದಷ್ಟಿದ್ದ ಪೋರ್ಚುಗೀಸ್‌ ಸೇನೆ ಅಳಿವೆಯಲ್ಲಿ ಬೀಡುಬಿಟ್ಟಿರುವುದು ರಾಣಿ ಅಬ್ಬಕ್ಕಳ ಗಮನಕ್ಕೆ ಬಂತು. ಕೂಡಲೇ ಅವಳು ಉಳ್ಳಾಲದ ಮೊಗವೀರರು, ಬಂಟರು, ಬಿಲ್ಲವರು, ಮುಸಲ್ಮಾನರು ಮುಂತಾದ ಸ್ಥಳೀಯರನ್ನು ಒಟ್ಟಾಗಿಸಿ ಕಗ್ಗತ್ತಲೆಯಲ್ಲೇ ದೋಣಿಗಳಲ್ಲಿ ತಂಡಗಳನ್ನು ತೆಂಗಿನ ಗರಿಗಳ ಪಂಜುಗಳೊಂದಿಗೆ ಮುನ್ನುಗ್ಗಿಸಿದಳು. ನಡುರಾತ್ರಿಯಲ್ಲಿ ಆರೇಳು ಹಡಗುಗಳಲ್ಲಿ ಮೈಮರೆತಿದ್ದ ಪೋರ್ಚುಗೀಸ್‌ ಹಡಗುಗಳಿಗೆ ಏಕ ಕಾಲದಲ್ಲಿ ಜೈ ಸೋಮನಾಥ ಎನ್ನುತ್ತಾ ಒಂದೇ ಸಮನೆ ಬೆಂಕಿಯ ಪಂಜುಗಳ ಮಳೆಗರೆಯಲಾಯಿತು. ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಅನೇಕರನ್ನು ಸದೆ ಬಡಿದರು ಎಂಬುದು ಇತಿಹಾಸದಲ್ಲಿ ಉಲ್ಲೇಖವಾಗಿದೆ.

Related Video