5 State Election Defeat: ಇಂದು CWC ಸಭೆ, ಸೋಲಿನ ಕುರಿತು ತೀವ್ರ ಚರ್ಚೆ

 ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್‌ ಪಕ್ಷ ಈ ಬಗ್ಗೆ ಪರಾಮರ್ಶೆ ನಡೆಸಲು ಇಂದು ಮಹತ್ವದ ಕಾರ‍್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಕರೆದಿದೆ.  ಪಕ್ಷದ ಮುಖ್ಯ ಕಚೇರಿಯಲ್ಲಿ ಇಂದು  ಸಂಜೆ 4 ಗಂಟೆಗೆ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಿಡಬ್ಲ್ಯುಸಿ ಸಭೆ ನಡೆಯಲಿದೆ. 

Share this Video
  • FB
  • Linkdin
  • Whatsapp

 ನವದೆಹಲಿ (ಮಾ. 12): ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್‌ ಪಕ್ಷ ಈ ಬಗ್ಗೆ ಪರಾಮರ್ಶೆ ನಡೆಸಲು ಇಂದು ಮಹತ್ವದ ಕಾರ‍್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಕರೆದಿದೆ. ಪಕ್ಷದ ಮುಖ್ಯ ಕಚೇರಿಯಲ್ಲಿ ಇಂದು ಸಂಜೆ 4 ಗಂಟೆಗೆ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಿಡಬ್ಲ್ಯುಸಿ ಸಭೆ ನಡೆಯಲಿದೆ. 

ಹಲವು ರೆಕಾರ್ಡ್ ಮಾಡಿದ ಯೋಗಿ, ಯುಪಿ ಚುನಾವಣೆಯಲ್ಲಿ ನಡೆದ ಕುತೂಹಲಕಾರಿ ಘಟನೆಗಳು

ಸಭೆಯಲ್ಲಿ ಪಂಚರಾಜ್ಯ ಚುನಾವಣೆ ಸೋಲಿಗೆ ಕಾರಣಗಳನ್ನು ಪರಾಮರ್ಶಿಸಲಿದ್ದಾರೆ. ಜೊತೆಗೆ ಸತತ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ನಾಯಕತ್ವದ ಬಗ್ಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿರುವ ಕಾರಣ ಸೆಪ್ಟೆಂಬರ್‌ನಲ್ಲಿ ನಿಗದಿಯಾಗಿರುವ ಆಂತರಿಕ (ಅಧ್ಯಕ್ಷೀಯ) ಚುನಾವಣೆಯನ್ನು ಅದಕ್ಕೂ ಮುನ್ನವೇ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿನ ಸೋಲಿಗೆ ಹೊಣೆ ಯಾರು ಎಂಬ ಬಗ್ಗೆಯೂ ಚರ್ಚೆ ನಡೆಯಲಿದ್ದು, ಸೋಲಿನ ಹೊಣೆಯನ್ನು ನಿರ್ದಿಷ್ಟನಾಯಕರಿಗೆ ಹೊರಿಸುವ ಸಾಧ್ಯತೆ ಇದೆ. 

Related Video