ಎಕ್ಸಿಟ್ ಪೋಲ್‌ಗಳಷ್ಟೇ ಅಲ್ಲ, ಜ್ಯೋತಿಷಿಗಳು ಹೇಳ್ತಿದ್ದಾರೆ ಮತ್ತೆ ಯೋಗಿ ಸರ್ಕಾರ್..!
ಸಾಕಷ್ಟು ಜಿದ್ದಾಜಿದ್ದಿನ ಕಣವಾಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ತವಕದಲ್ಲಿದೆ. ಇದಕ್ಕೆ ಇಂಬು ನೀಡುವಂತೆ ಚುನಾವಣೋತ್ತರ ಸಮೀಕ್ಷೆಗಳು ಉತ್ತರಪ್ರದೇಶದಲ್ಲಿ ಯಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿಗೆ ಸ್ಪಷ್ಟಬಹುಮತ ಲಭಿಸಲಿದೆ ಎಂದಿವೆ.
ಸಾಕಷ್ಟುಜಿದ್ದಾಜಿದ್ದಿನ ಕಣವಾಗಿರುವ ಉತ್ತರಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ತವಕದಲ್ಲಿದೆ. ಇದಕ್ಕೆ ಇಂಬು ನೀಡುವಂತೆ ಚುನಾವಣೋತ್ತರ ಸಮೀಕ್ಷೆಗಳು ಉತ್ತರಪ್ರದೇಶದಲ್ಲಿ ಯಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿಗೆ ಸ್ಪಷ್ಟಬಹುಮತ ಲಭಿಸಲಿದೆ ಎಂದಿವೆ.
ಗೋವಾ, ಉತ್ತರಾಖಂಡದಲ್ಲಿ ಕಾಂಗ್ರೆಸ್-ಬಿಜೆಪಿ ಫೈಟ್
ಚುನಾವಣಾ ಸಮೀಕ್ಷೆಗಳಷ್ಟೇ ಅಲ್ಲ, ‘ಉತ್ತರ ಪ್ರದೇಶದಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆದುಕೊಳ್ಳಲಿದೆ ಮತ್ತು ಯೋಗಿ ಆದಿತ್ಯನಾಥ ಮತ್ತೊಮ್ಮೆ ಸರ್ಕಾರ ರಚನೆ ಮಾಡಲಿದ್ದಾರೆ’ ಎಂದು ಹಲವು ಜ್ಯೋತಿಷ್ಯಶಾಸ್ತ್ರಜ್ಞರು ಕೂಡ ಭವಿಷ್ಯ ನುಡಿದಿದ್ದಾರೆ. ‘ಈ ವರ್ಷದ ಅಧಿಪತಿ ಮಂಗಳ ಆಗಿರುವುದರಿಂದ ಮತ್ತು ಮಂಗಳ ಕ್ಷತ್ರಿಯ ಸಮುದಾಯದ ಅಧಿಪತಿಯೂ ಆಗಿರುವುದರಿಂದ ಯೋಗಿ ಅವರು ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಬಿಜೆಪಿ 240 ಸ್ಥಾನಗಳನ್ನು ಗೆದ್ದರೆ, ಸಮಾಜವಾದಿ ಪಕ್ಷ 138-157 ಸ್ಥಾನಗಳನ್ನು ಗೆಲ್ಲಲಿದೆ’ ಎಂದು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯದ ಜ್ಯೋತಿಷಿ ಅಶ್ವಿನಿ ಪಾಂಡೆ ಹೇಳಿದ್ದಾರೆ.