Asianet Suvarna News Asianet Suvarna News

ಮಹಾರಾಷ್ಟ್ರದ ಬೆನ್ನಲ್ಲೇ ದೆಹಲಿಯಲ್ಲೂ ಜನತಾ ಕರ್ಫ್ಯೂ..?

ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಹೀಗಿರುವಾಗ ಸೋಂಕು ನಿಯಂತ್ರಿಸಲು ರಾಜ್ಯಾದ್ಯಂತ ಲಾಕ್‌ಡೌನ್‌ ರೀತಿಯ ಕಠಿಣ ನಿರ್ಬಂಧ ಹೇರಲಾಗಿದೆ. ಸದ್ಯ ಮಹಾಮಾಋಷಟ್‌ರದ ಬೆನ್ನಲ್ಲೇ ದೆಹಲಿಯಲ್ಲೂ ಜನತಾ ಕರ್ಫ್ಯೂ ವಿಧಿಸಲಾಗುತ್ತದೆ ಎಂಬ ಮಾತುಗಳೂ ಕೇಳಿ ಬಂದಿವೆ.

 

ನವದೆಹಲಿ(ಏ.15)ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಹೀಗಿರುವಾಗ ಸೋಂಕು ನಿಯಂತ್ರಿಸಲು ರಾಜ್ಯಾದ್ಯಂತ ಲಾಕ್‌ಡೌನ್‌ ರೀತಿಯ ಕಠಿಣ ನಿರ್ಬಂಧ ಹೇರಲಾಗಿದೆ. ಸದ್ಯ ಮಹಾಮಾಋಷಟ್‌ರದ ಬೆನ್ನಲ್ಲೇ ದೆಹಲಿಯಲ್ಲೂ ಜನತಾ ಕರ್ಫ್ಯೂ ವಿಧಿಸಲಾಗುತ್ತದೆ ಎಂಬ ಮಾತುಗಳೂ ಕೇಳಿ ಬಂದಿವೆ.

ಹೌದು ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಕೊರೋನಾ ಪ್ರಕರಣಗಳ ಸಂಖ್ಯೆ ಮಿತಿ ಮೀರಿದೆ. ಸೋಂಕು ನಿಯಂತ್ರಸಿಲು ಸರ್ಕಾರ ಅನೇಕ ನಿಯಮಗಳನ್ನು ಜಾರಿಗೊಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೊರೋನಾ ಸೋಂಕಿನ ನಾಲ್ಕನೇ ಅಲೆ ದೆಹಲಿ ನಿವಾಸಿಗರನ್ನು ಬೆಚ್ಚಿ ಬೀಳಿಸಿದೆ. ಹೀಗಿರುವಾಗ ಸಿಎಂ ಅರವಿಂದ ಕೇಜ್ರೀವಾಲ್ ಸೋಂಕು ನಿಯಂತ್ರಿಸಲು ಜನತಾ ಕರ್ಫ್ಯೂ ಅಥವಾ ವೀಕೆಂಡ್‌ ಲಾಕ್‌ಡೌನ್ ಹೇರುವ ನಿರ್ಧಾರ ತೆಗೆದುಕೊಂಡಿದ್ದಾರೆ. 

ಈ ಬಗ್ಗೆ ಇಂದು, ಗುರುವಾರ ಮಧ್ಯಾಹ್ನ ದೆಹಲಿ ಗವರ್ನರ್ ಜೊತೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಿದ್ದಾರೆನ್ನಲಾಗಿದೆ. 

Video Top Stories