Asianet Suvarna News Asianet Suvarna News

ಕಳಚಿದ ನೋಸ್‌ ವೀಲ್‌, ಏರ್‌ ಆಂಬುಲೆನ್ಸ್‌ ತುರ್ತು ಭೂಸ್ಪರ್ಶ!

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ನೋಸ್‌ ವೀಲ್‌ ಕಳಚಿದ ಹಿನ್ನೆಲೆಯಲ್ಲಿ ಏರ್‌ ಆಂಬುಲೆನ್ಸ್‌ವೊಂದು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿತು. ಚಕ್ರ ಕಳಚಿದ ಕೂಡಲೇ ಮುಂಬೈನ ವಿಮಾನ ನಿಲ್ದಾಣ ಸಿಬ್ಬಂದಿಗೆ ಪೈಲಟ್ ಸೂಚನೆ ನೀಡಿದ್ದಾರೆ.

ಮುಂಬೈ(ಮೇ.08): ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ನೋಸ್‌ ವೀಲ್‌ ಕಳಚಿದ ಹಿನ್ನೆಲೆಯಲ್ಲಿ ಏರ್‌ ಆಂಬುಲೆನ್ಸ್‌ವೊಂದು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿತು. ಚಕ್ರ ಕಳಚಿದ ಕೂಡಲೇ ಮುಂಬೈನ ವಿಮಾನ ನಿಲ್ದಾಣ ಸಿಬ್ಬಂದಿಗೆ ಪೈಲಟ್ ಸೂಚನೆ ನೀಡಿದ್ದಾರೆ.

ಭಾರತದಲ್ಲಿ ಆಕ್ಸಿಜನ್ ಎಮರ್ಜೆನ್ಸಿ: ಪ್ರತಿದಿನ ಬೇಕು 8400 ಮೆಟ್ರಿಕ್ ಟನ್ ಆಕ್ಸಿಜನ್

 ರಕ್ಷಣಾ ತಂಡಗಳು, ವೈದ್ಯರು, ಸಿಐಎಸ್‌ಎಫ್‌ ಸಿಬ್ಬಂದಿ ಸೇರಿದಂತೆ ಭಾರಿ ಮುನ್ನೆಚ್ಚರಿಕೆಯ ಸಿದ್ಧತೆಯೊಂದಿಗೆ ಏರ್‌ ಆಂಬುಲೆನ್ಸ್‌ ಅನ್ನು ಸುರಕ್ಷಿತವಾಗಿ ಇಳಿಸಲಾಯಿತು. ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜೆಟ್‌ ಸರ್ವ್‌ ಕಂಪನಿಗೆ ಸೇರಿದ ಈ ಏರ್ ಆಂಬುಲೆನ್ಸ್‌ ನಾಗಪುರದಿಂದ ಹೈದರಾಬಾದ್‌ಗೆ ಹೊರಟಿತ್ತು. ಇದರಲ್ಲಿ ಇಬ್ಬರು ಸಿಬ್ಬಂದಿ, ವೈದ್ಯ, ಪ್ಯಾರಾಮೆಡಿಕಲ್‌ ಸಿಬ್ಬಂದಿ ಹಾಗೂ ಒಬ್ಬ ರೋಗಿ ಇದ್ದರು.

ಲ್ಯಾಂಡ್ ಆದ ಬಳಿಕ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ವಿಮಾನದಲ್ಲಿದ್ದ ಎಲ್ಲರೂ ಸುರಕ್ಷಿತರಾಗಿದ್ದು ಅವರನ್ನು ಸ್ಥಳಾಂತರಿಸಲಾಗಿದೆ. ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Video Top Stories