
ಉತ್ತರಾಖಂಡ: ನದಿಗೆ ಬಿದ್ದ ಗಾಡಿ, 8 ಮಂದಿ ದುರ್ಮರಣ
ಚಲಿಸುತ್ತಿದ್ದ ವಾಹನವೊಂದು ನದಿಗೆ ಬಿದ್ದು 8 ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ. ವಾಹನವು ಕೈಲ್ ನದಿಗೆ ಬಿದ್ದಿದ್ದು, ದುರ್ಘಟನೆಯಲ್ಲಿ 5 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬ ವ್ಯಕ್ತಿ ಇನ್ನೂ ನಾಪತ್ತೆಯಾಗಿದ್ದಾನೆ. ಆ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದೆ, ಎಂದು ರಾಜ್ಯ ವಿಪತ್ತು ನಿರ್ವಹಣಾ ತಂಡದ ಅಧಿಕಾರಿಗಳು ಮಾಹಿತಿ ನೀಡಿದರು.
ಚಮೋಲಿ, ಉತ್ತರಾಖಂಡ (ಅ.14): ಚಲಿಸುತ್ತಿದ್ದ ವಾಹನವೊಂದು ನದಿಗೆ ಬಿದ್ದು 8 ಮಂದಿ ಮೃತಪಟ್ಟಿರುವ ಘಟನೆ ಉತ್ತರಾಖಂಡದ ಚಮೋಲಿಯಲ್ಲಿ ನಡೆದಿದೆ.
ವಾಹನವು ಕೈಲ್ ನದಿಗೆ ಬಿದ್ದಿದ್ದು, ದುರ್ಘಟನೆಯಲ್ಲಿ 5 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಬ್ಬ ವ್ಯಕ್ತಿ ಇನ್ನೂ ನಾಪತ್ತೆಯಾಗಿದ್ದಾನೆ. ಆ ವ್ಯಕ್ತಿಗಾಗಿ ಶೋಧ ಕಾರ್ಯ ಮುಂದುವರಿದಿದೆ, ಎಂದು ರಾಜ್ಯ ವಿಪತ್ತು ನಿರ್ವಹಣಾ ತಂಡದ ಅಧಿಕಾರಿಗಳು ಮಾಹಿತಿ ನೀಡಿದರು.