Asianet Suvarna News Asianet Suvarna News

ದಿದಿ ನಾಡಲ್ಲಿ ಟಿಎಂಸಿ ಬೆಂಬಲಿಗರ ದಾದಾಗಿರಿ: ಅಕ್ರಮ ತನಿಖೆಗೆ ಬಂದ ಅಧಿಕಾರಿಗಳ ಮೇಲೆಯೇ ಆಟ್ಯಾಕ್‌ !

ಮಮತಾ ಬೆಂಬಲಿಗರ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲಾಗಿದೆ. ಇನ್ನೂ ಬಿಜೆಪಿ, ಕಾಂಗ್ರೆಸ್‌ ದೀದಿ ರಾಜೀನಾಮೆಗೆ ಆಗ್ರಹಿಸಿವೆ.
 

ಕೋಲ್ಕತಾ: ಅಕ್ರಮ ಪಡಿತರ ಹಗರಣದ ತನಿಖೆಗೆ ಆಗಮಿಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳ ಮೇಲೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರು ಮಾರಣಾಂತಿಕವಾಗಿ ಹಲ್ಲೆ(Attack) ನಡೆಸಿದ ಘಟನೆ ಶುಕ್ರವಾರ ಪಶ್ಚಿಮ ಬಂಗಾಳದಲ್ಲಿ(West bengal) ನಡೆದಿದೆ. ಗಾಯಾಳು ಅಧಿಕಾರಿಗಳನ್ನು ಆಸತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಅವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ದೂರು ದಾಖಲಿಸಲಾಗಿದೆ ಎಂದು ಇ.ಡಿ. ಮಾಹಿತಿ ನೀಡಿದೆ. ಈ ನಡುವೆ ಅಧಿಕಾರಿಗಳ ಮೇಲಿನ ಹಲ್ಲೆಯನ್ನು ವಿಪಕ್ಷಗಳಾದ ಬಿಜೆಪಿ(BJP) ಮತ್ತು ಕಾಂಗ್ರೆಸ್(Congress) ಕಟುವಾಗಿ ಟೀಕಿಸಿವೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಆಡಳಿತ ದೇಶದ ಭದ್ರತೆಗೆ ಮಾರಕವಾಗಿದ್ದು, ಘಟನೆ ಹೊಣೆ ಹೊತ್ತು ಕೂಡಲೇ  ಮಮತಾ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿವೆ. ಅಲ್ಲದೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಉಭಯ ಪಕ್ಷಗಳು ಆಗ್ರಹ ಮಾಡಿದೆ.

ಇದನ್ನೂ ವೀಕ್ಷಿಸಿ:  PES ವಿಶ್ವವಿದ್ಯಾಲಯದಲ್ಲಿ ವಿದೇಶಾಂಗ ಸಚಿವರು: ಸಾವಿರಾರು ವಿದ್ಯಾರ್ಥಿಗಳ ಜತೆ ಜೈ ಶಂಕರ್ ಸಂವಾದ

Video Top Stories