News Hour: ನಿಲ್ಲದ 'ರಾಮ' ರಾಜಕೀಯ: ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್‌! ಬಿಜೆಪಿ ಆಕ್ರೋಶ

ಕಾಂಗ್ರೆಸ್ ಇದೀಗ ರಾಮ ಮಂದಿರ ಪ್ರಾಣಪ್ರತಿಷ್ಟಾಪನೆ ಆಹ್ವಾನ ತಿರಸ್ಕರಿಸಿದೆ. ಇದು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕ್ರಮ ಎಂದು ಕಾರಣನೀಡಿ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದೆ. ಈ ಹಿನ್ನೆಲೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. 

First Published Jan 11, 2024, 11:34 AM IST | Last Updated Jan 11, 2024, 11:34 AM IST

ಅಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಜನವರಿ 22ರಂದು ನಡೆಯಲಿದೆ. ರಾಮ ಮಂದಿರ ಉದ್ಘಾಟನೆಗೆ ಬಹುತೇಕ ಗಣ್ಯರನ್ನು ಆಹ್ವಾನಿಸಲಾಗಿದೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರನ್ನೂ ಪ್ರಾಣಪ್ರತಿಷ್ಟಾಪನೆಗೆ ಆಹ್ವಾನಿಸಲಾಗಿದೆ. ಆದರೆ ಕಾಂಗ್ರೆಸ್ ಇದೀಗ ರಾಮ ಮಂದಿರ ಪ್ರಾಣಪ್ರತಿಷ್ಟಾಪನೆ ಆಹ್ವಾನ ತಿರಸ್ಕರಿಸಿದೆ. ಇದು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕ್ರಮ ಎಂದು ಕಾರಣನೀಡಿ ಉದ್ಘಾಟನೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದೆ. ಈ ಹಿನ್ನೆಲೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.