ಬಿಹಾರದಲ್ಲಿ ಬಿಜೆಪಿ ಗೆದ್ದರೆ ಉಚಿತ ಕೊರೊನಾ ಲಸಿಕೆ: ವಿವಾದ ಗುರಿಯಾಯ್ತು ಬಿಜೆಪಿ ನಿಲುವು

ಕೊರೊನಾ ವ್ಯಾಕ್ಸಿನ್ ವಿಚಾರದಲ್ಲಿಯೂ ಪಾಲಿಟಿಕ್ಸ್ ಶುರುವಾಗಿದೆ. ಚುನಾವಣಾ ಪ್ರಚಾರಕ್ಕೆ ಇದನ್ನು ಬಳಸಿಕೊಳ್ಳಲಾಗುತ್ತಿದೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಬಿಜೆಪಿ ಗೆದ್ದರೆ ಬಿಹಾರಕ್ಕೆ ಉಚಿತವಾಗಿ ಕೊರೊನಾ ಲಸಿಕೆ ನೀಡುವುದಾಗಿ ಬಿಜೆಪಿ ಹೇಳಿದೆ.

First Published Oct 23, 2020, 3:30 PM IST | Last Updated Oct 23, 2020, 3:31 PM IST

ಬೆಂಗಳೂರು (ಅ. 23): ಕೊರೊನಾ ವ್ಯಾಕ್ಸಿನ್ ವಿಚಾರದಲ್ಲಿಯೂ ಪಾಲಿಟಿಕ್ಸ್ ಶುರುವಾಗಿದೆ. ಚುನಾವಣಾ ಪ್ರಚಾರಕ್ಕೆ ಇದನ್ನು ಬಳಸಿಕೊಳ್ಳಲಾಗುತ್ತಿದೆ. ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಬಿಜೆಪಿ ಗೆದ್ದರೆ ಬಿಹಾರಕ್ಕೆ ಉಚಿತವಾಗಿ ಕೊರೊನಾ ಲಸಿಕೆ ನೀಡುವುದಾಗಿ ಬಿಜೆಪಿ ಹೇಳಿದೆ. ಈ ನಿಲುವು ಭಾರೀ ವಿವಾದವನ್ನು ಎಬ್ಬಿಸಿದೆ.  

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಮಾಡಿದ 5 ಎಡವಟ್ಟುಗಳಿವು

ಬರೀ ಬಿಹಾರಕ್ಕೆ ಮಾತ್ರ ಯಾಕೆ? ಬೇರೆ ಜನರಿಗೆ ಯಾಕಿಲ್ಲ? ಎಂದು ಪ್ರತಿಪಕ್ಷಗಳು ಹರಿಹಾಯ್ದಿವೆ. ಇನ್ನು ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿಯೂ ಉಚಿತ ಕೊರೊನಾ ಲಸಿಕೆ ಅಸ್ತ್ರವನ್ನು ಪ್ರಯೋಗಿಸಲಾಗಿದೆ.