ಅಮಿತ್ ಶಾ ಆಯ್ತು, ಈಗ ನಡ್ಡಾ ಭೇಟಿಗಾಗಿ ಕಾಯುತ್ತಿರುವ ರಾಜ್ಯ ಬಿಜೆಪಿ ನಾಯಕರು!

*ಏಪ್ರಿಲ್16 ಮತ್ತು 17ರಂದು ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
*ವಿಜಯನಗರದ ಹೊಸಪೇಟೆ ಬಿಜೆಪಿ ಕಾರ‍್ಯಕಾರಿಣಿಯಲ್ಲಿ ನಡ್ಡಾ ಭಾಗಿ
*ರಾಜ್ಯ ವಿಧಾನಸಭಾ ಚುನಾವಣೆ ಸಿದ್ಧತೆ, ಪಕ್ಷ ಸಂಘಟನೆ  ಚರ್ಚೆ

First Published Apr 4, 2022, 12:24 PM IST | Last Updated Apr 4, 2022, 12:27 PM IST

ಬೆಂಗಳೂರು (ಏ. 04): ಏಪ್ರಿಲ್16 ಮತ್ತು 17ರಂದು ವಿಜಯನಗರದ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿಯ ವಿಶೇಷ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭಾಗವಹಿಸಲಿದ್ದಾರೆ. ಏ.16ರಂದು ಸಂಜೆ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸುವ ನಡ್ಡಾ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ, ಪಕ್ಷದ ಸಂಘಟನೆ, ಪಕ್ಷವನ್ನು ಮತ್ತಷ್ಟು ಬಲಪಡಿಸುವ ಬಗ್ಗೆ (Karnataka Politics) ಮಾರ್ಗದರ್ಶನ ನೀಡಲಿದ್ದಾರೆ. 

ಇದನ್ನೂ ಓದಿ: ಹೊರಟ್ಟಿ ಬೆನ್ನಲ್ಲೇ ಜೆಡಿಎಸ್‌ನ ಬಹಳಷ್ಟು ನಾಯಕರು ಬಿಜೆಪಿ ಕಡೆ ಒಲವು, ಮಾಜಿ ಸಿಎಂ ಸ್ಫೋಟಕ ಸುಳಿವು

ರಾಜ್ಯಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮನ ಬೆನಲ್ಲೇ ಸಂಪುಟ ಸರ್ಜರಿ ಬಗ್ಗೆ ಚರ್ಚೆಗಳು ಜೋರಾಗಿವೆ. ಅಲ್ಲದೇ ನಡ್ಡಾ ಭೇಟಿ ವೇಳೆ ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಈ ವೇಳೆ ನಿಗಮ ಮಂಡಳಿ ಆಯ್ಕೆಯ ಬಗ್ಗೆ ಚರ್ಚೆ ನಡೆಯಲಿದೆ. ಪಂಚರಾಜ್ಯ ಚುನಾವಣೆ ಫಲಿತಾಂಶ ಬೆನ್ನಲ್ಲೇ ಕರ್ನಾಟಕದಲ್ಲಿ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವ ವರದಿಗಳು ಬಿತ್ತರವಾಗಿದ್ದವು. ಆದರೆ ಈವರೆಗೂ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಹೆಜ್ಜೆ ಇಟ್ಟಿಲ್ಲ. ಈಗ ನಡ್ಡಾ ಆಗಮನ ಬಳಿಕ ಬೊಮ್ಮಾಯಿ ಸಂಪುಟದಲ್ಲಿ ಬದಲಾವಣೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.