Asianet Suvarna News Asianet Suvarna News

ಮೋದಿ ಕುರಿತು ಬಿಬಿಸಿ ಸಾಕ್ಷ್ಯಚಿತ್ರ ಕೇರಳದಾದ್ಯಂತ ಪ್ರದರ್ಶನ, ಬಿಜೆಪಿ, ಯುವ ಮೋರ್ಚಾ ಪ್ರತಿಭಟನೆ!

ಗೋಧ್ರಾ ಹತ್ಯಾಕಾಂಡದ ಬಳಿಕ ನಡೆದ ಗುಜರಾತ್‌ ಗಲಭೆಯ ಕುರಿತಾಗಿ ಬಿಬಿಸಿ ಮಾಡಿರುವ ಸಾಕ್ಷ್ಯಚಿತ್ರವನ್ನು ಕೇರಳದಾದ್ಯಂತ ಪ್ರದರ್ಶನ ಮಾಡಲಾಗಿದೆ. ಎಸ್‌ಎಫ್‌ಐ ನೇತೃತ್ವದಲ್ಲಿ ಸಾಕ್ಷ್ಯಚಿತ್ರ ಪ್ರದರ್ಶನವಾಗಿದ್ದರೆ, ಬಿಜೆಪಿ ಹಾಗೂ ಬಿಜೆಪಿ ಯುವ ಮೋರ್ಚಾದಿಂದ ರಾಜ್ಯದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆದಿದೆ.
 

ತಿರುವನಂತಪುರ (ಜ.24): 2002ರ ಗುಜರಾತ್ ಗಲಭೆಗಳ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ 'ಇಂಡಿಯಾ: ಮೋದಿ ಕ್ವಶ್ಚನ್' ಅನ್ನು ಕೇರಳದಾದ್ಯಂತ ಎಸ್‌ಎಫ್‌ಐ ಪ್ರದರ್ಶನ ಮಾಡಿದೆ. ಸ್ಟೂಡೆಂಟ್‌ ಫೆಡರೇಷನ್‌ ಆಫ್‌ ಇಂಡಿಯಾ ನಡೆಸಿದ್ದ ಈ ಪ್ರದರ್ಶನಕ್ಕೆ ಬಿಜೆಪಿ ಹಾಗೂ ಯುವ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿವೆ.

ಕೇರಳ ಮಾತ್ರವಲ್ಲದೆ ದೇಶದ ವಿವಿಧ ಭಾಗಗಳಲ್ಲಿ ಈ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಲಾಗಿದೆ. ಇದರ ಬೆನ್ನಲ್ಲಿಯೇ ಬಿಜೆಪಿ ಹಾಗೂ ಯುವ ಮೋರ್ಚಾ ಕೂಡ ತನ್ನ ಪ್ರತಿಭಟನೆಯನ್ನು ತೀವ್ರ ಮಾಡಿದೆ. ಈ ನಡುವೆ ಸಾಕ್ಷ್ಯಚಿತ್ರಕ್ಕೆ ಅಚ್ಚರಿ ಎನ್ನುವಂತೆ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್‌ ಆಂಟನಿ ವಿರೋಧ ವ್ಯಕ್ತಪಡಿಸಿದ್ದಾರೆ.

ಬ್ಯಾನ್‌ ಆದರೂ ಹೈದರಾಬಾದ್‌ ವಿವಿಯಲ್ಲಿ ಮೋದಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಕೇರಳ, ಜೆಎನ್‌ಯೂನಲ್ಲೂ ಸ್ಕ್ರೀನಿಂಗ್..!

ಪಾಲಕ್ಕಾಡ್‌ನ ವಿಕ್ಟೋರಿಯಾ ಕಾಲೇಜು ಮತ್ತು ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನವರೆಗೆ ಯುವ ಮೋರ್ಚಾದಿಂದ ಪ್ರತಿಭಟನಾ ಮೆರವಣಿಗೆಗಳನ್ನು ನಡೆಸಿತು. ಅಲ್ಲಿ ಎಸ್‌ಎಫ್‌ಐ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸುವ ಘೋಷಣೆ ಮಾಡಿತ್ತು.

Video Top Stories