ಚಕ್ಕಾ ಜಾಮ್‌ಗೆ ಪಕ್ಕಾ ಬ್ಲೂ ಪ್ರಿಂಟ್, ತಡೆಗೋಡೆಗೆ ಹೋರಾಟಗಾರರ ನ್ಯೂ ಪ್ಲ್ಯಾನ್..!
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತ ಸಂಘಟನೆಗಳು ಇಂದು ‘ಚಕ್ಕಾ ಜಾಮ್’ಗೆ ಕರೆ ಕೊಟ್ಟಿವೆ. ಇಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೆದ್ದಾರಿ ತಡೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬೆಂಗಳೂರು (ಫೆ. 06): ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತ ಸಂಘಟನೆಗಳು ಇಂದು ‘ಚಕ್ಕಾ ಜಾಮ್’ಗೆ ಕರೆ ಕೊಟ್ಟಿವೆ. ಇಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೆದ್ದಾರಿ ತಡೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ರೈತ ಹೋರಾಟದಲ್ಲಿ ವಿದೇಶಿ ಪಿತೂರಿ ಬಟಾಬಯಲು; ತನಿಖಾ ಸಂಸ್ಥೆಗಳಿಂದ ಮಾಹಿತಿ!
ಜ.26 ರ ಗಣರಾಜ್ಯೋತ್ಸವದಂದು ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್‌ನಲ್ಲಿ ಭಾರೀ ಹಿಂಸಾಚಾರ ಉಂಟಾದ ಹಿನ್ನೆಲೆಯಲ್ಲಿ ಎಚ್ಚೆತ್ತ ದೆಹಲಿ ಪೊಲೀಸ್ ಮುಂಜಾಗ್ರತಾ ಕ್ರಮವಾಗಿ ಈ ಬಿಗಿ ಕ್ರಮಗಳನ್ನು ಕೈಗೊಂಡಿದೆ. ದೆಹಲಿಯ ಸಂಸತ್ತು, ಇಂಡಿಯಾ ಗೇಟ್‌ನಲ್ಲಿಯೂ ಭಾರೀ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಪೊಲೀಸ್ ಪಡೆಯು ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿಟ್ಟು, ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ. ಈ ಬಾರಿ ರೈತ ಹೋರಾಟ ತಾರ್ಕಿಕ ಅಂತ್ಯ ಕಾಣಲಿದೆಯಾ..? ಅನ್ನದಾತನ ಆಕ್ರೋಶಕ್ಕೆ ಕೇಂದ್ರ ಸರ್ಕಾರ ಮಣಿಯುತ್ತಾ..?