ಕಾಂಗ್ರೆಸ್‌ನಿಂದ ಭಾರತ್ ಜೋಡೋ ಯಾತ್ರೆ, ರಾಜ್ಯ ಬಿಜೆಪಿಯಿಂದ ಜನಸ್ಪಂದನ ಕಾರ್ಯಕ್ರಮ!

ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ. ನಾಳೆ ಬಿಜೆಪಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದೆ. ಇತ್ತ ಸುಪ್ರೀಂ ಕೋರ್ಟ್‌ನಲ್ಲಿ ಪೂಜಾಸ್ಥಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಮ್ಮತಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

First Published Sep 9, 2022, 10:42 PM IST | Last Updated Sep 9, 2022, 10:42 PM IST

12 ರಾಜ್ಯಗಳು, ಎರಡು ಕೇಂದ್ರಾಡಳಿತ ಪ್ರದೇಶದ ಮೂಲಕ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸಾಗಲಿದೆ. ಪ್ರತಿ ದಿನ 25 ಕಿಲೋಮೀಟರ್‌ನಂತೆ  150 ದಿನ ಈ ಯಾತ್ರೆ ಸಾಗಲಿದೆ. ಛಿದ್ರಗೊಂಡಿರುವ ಭಾರತವನ್ನು ಒಂದುಗೂಡಿಸಲು ಯಾತ್ರೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಇತ್ತ ಬಿಜೆಪಿ ನಾಳೆ ದೊಡ್ಡಬಳ್ಳಾಪುರದಲ್ಲಿ ಅತೀ ದೊಡ್ಡ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದೆ. ದೊಡ್ಡಬಳ್ಳಾಪುರ ಸೇರಿದಂತೆ ಕರ್ನಾಟಕದ 7 ಕಡೆಗಳಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಯಾತ್ರೆ, ಸಮಾವೇಶ, ಕಾರ್ಯಕ್ರಮಗಳು ಹೆಚ್ಚಾಗತೊಡಗಿದೆ. ಇತ್ತ ಸುಪ್ರೀಂ ಕೋರ್ಟ್‌ ಪೂಜಾಸ್ಥಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಮ್ಮತಿಸಿದೆ. ಇಂದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.