ಬಿಆರ್‌ಎಸ್‌ಗೆ ಸೆಡ್ಡು ಹೊಡೆದ ಕಾಂಗ್ರೆಸ್: ಸಿ-ವೋಟರ್ ಸಮೀಕ್ಷೆಯಲ್ಲಿ 'ಕೈ'ಗೆ ಮುನ್ನಡೆ
ಸಿ-ವೋಟರ್ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಈ ಮೂಲಕ ಆಡಳಿತಾರೂಢ ಬಿಆರ್‌ಎಸ್‌ಗೆ ಸೆಡ್ಡು ಹೊಡೆದಿದೆ.
ತೆಲಂಗಾಣ ವಿಧಾನಸಭೆ ಚುನವಣೆಗೆ ದಿನಗಣನೆ ಆರಂಭವಾಗಿದ್ದು, ಮತದಾರರ ಓಲೈಕೆಗೆ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಚುನಾವಣೆ ಹತ್ತಿರವಾಗ್ತಿದ್ದಂತೆ ಮತದಾರರ ಓಲೈಕೆ ಕಸರತ್ತು ಮುಂದುವರೆದಿದೆ. ಆಡಳಿತಾರೂಢ ಬಿಆರ್‌ಎಸ್‌ಗೆ(BRS) ಕಾಂಗ್ರೆಸ್ ಸೆಡ್ಡು ಹೊಡೆದಿದ್ದು, ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಕಾಂಗ್ರೆಸ್(Congress) ಮುನ್ನಡೆ ದೊರೆತಿದೆ. ಸಿ-ವೋಟರ್ ಸಮೀಕ್ಷೆಯಲ್ಲಿ(C-voter survey) ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮಹಿಳೆಯರಿಗೆ ಮಹಾಲಕ್ಷ್ಮಿ ಯೋಜನೆಯಡಿ ತಿಂಗಳಿಗೆ 2,500 ರೂಪಾಯಿ, 500 ರೂಪಾಯಿಗೆ ಗ್ಯಾಸ್ ಸಿಲಿಂಡರ್, ಆರ್ಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ಯುವತಿಯರಿಗೆ ವಿವಾಹದ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿ, ಯುವತಿಯರಿಗೆ ವಿವಾಹದ ಸಂದರ್ಭದಲ್ಲಿ 10 ಗ್ರಾಂ ಚಿನ್ನ, ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್, ಸಾಮಾಜಿಕ ಭದ್ರತಾ ಠೇವಣಿ ಮೊತ್ತ ಹೆಚ್ಚಳ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿದೆ.
ಇದನ್ನೂ ವೀಕ್ಷಿಸಿ: ಇಸ್ರೇಲ್ ಸೈನಿಕರು 24 ಗಂಟೆಯೂ ನಮ್ಮನ್ನು ರಕ್ಷಿಸುತ್ತಿದ್ದಾರೆ: ಇಸ್ರೇಲ್ ಕನ್ನಡಿಗರು