Asianet Suvarna News Asianet Suvarna News

Covid 19: ದೆಹಲಿಯಲ್ಲಿ ಪ್ರತಿನಿತ್ಯ 1 ಸಾವಿರಕ್ಕೂ ಹೆಚ್ಚು ಕೊರೋನಾ ಕೇಸ್‌

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಕೋವಿಡ್ ಸೋಂಕು (Covid 19) ಹೆಚ್ಚಾಗುತ್ತಿದೆ. ಪ್ರತಿನಿತ್ಯ ಸಾವಿರಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿವೆ.  ದೇಶದಲ್ಲಿ ಕೋವಿಡ್‌ ಏರಿಕೆಯಾಗಿ 4ನೇ ಅಲೆ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಲಿದ್ದಾರೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಕೋವಿಡ್ ಸೋಂಕು (Covid 19) ಹೆಚ್ಚಾಗುತ್ತಿದೆ. ಪ್ರತಿನಿತ್ಯ ಸಾವಿರಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿವೆ.  ದೇಶದಲ್ಲಿ ಕೋವಿಡ್‌ ಏರಿಕೆಯಾಗಿ 4ನೇ ಅಲೆ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಭೆ ನಡೆಸಲಿದ್ದಾರೆ. ಈ ವೇಳೆ ಅವರು ಕೈಗೊಳ್ಳಬೇಕಾದ ನಿಯಂತ್ರಣ ಕ್ರಮಗಳ ಬಗ್ಗೆ ಸಲಹೆ-ಸೂಚನೆ ನೀಡುವ ಸಾಧ್ಯತೆ ಇದೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನಿಂದ ಮಧ್ಯಾಹ್ನ 12 ಗಂಟೆಗೆ ವರ್ಚುವಲ್‌ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.  ದಿಲ್ಲಿ ಹಾಗೂ ಸುತ್ತಮುತ್ತ ಸೋಂಕು ವ್ಯಾಪಕವಾಗಿದ್ದು, ದೇಶದ ನಿತ್ಯದ ಸುಮಾರು 2500 ಕೇಸುಗಳಲ್ಲಿ 1000ಕ್ಕೂ ಹೆಚ್ಚು ಕೇಸುಗಳು ದಿಲ್ಲಿಯಿಂದಲೇ ವರದಿಯಾಗುತ್ತಿವೆ. ಕರ್ನಾಟಕದಲ್ಲೂ 1 ವಾರದಲ್ಲಿ ಸೋಂಕಿನ ಪ್ರಮಾಣ ಶೇ.71ರಷ್ಟುಹೆಚ್ಚಿದೆ.

Video Top Stories