ಅಕ್ರಮ ವಲಸಿಗರ ಹೊರದಬ್ಬಲು ಪಣತೊಟ್ಟ ಅಮಿತ್ ಶಾ, ದೆಹಲಿಯಲ್ಲಿ ಅಖಾಡಕ್ಕಿಳಿದ ಪೊಲೀಸ್!
ಅಕ್ರಮ ವಲಸಿಗರನ್ನು ಹೊರದಬ್ಬಲು ಕೇಂದ್ರ ಸರ್ಕಾರ ಕಾರ್ಯಾಚರಣೆ ಆರಂಭಿಸಿದೆ. ದೆಹಲಿ ಲೆಪ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೆನಾ ಮಹತ್ವದ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಖಾಕಿ ಪಡೆ ಅಖಾಡಕ್ಕಿಳಿದಿದೆ.
ದೆಹಲಿ(ಡಿ.25) ದೇಶದಲ್ಲಿ ಬಹುತೇಕ ಭಾಗಗಳಲ್ಲಿ ಅಕ್ರಮ ವಲಸಿಗರು ನೆಲೆಸಿರುವುದು ಪತ್ತೆಯಾಗಿದೆ. ಈ ಪೈಕಿ ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿ ಭಾರತ ಪ್ರವೇಶಿಸಿರುವ ವಲಸಿಗರು ಅಕ್ರಮವಾಗಿ ಆಧಾರ್ ಕಾರ್ಡ್ ಹಾಗೂ ಇತರ ದಾಖಲೆ ಸೃಷ್ಟಿಸಿಕೊಂಡಿದ್ದಾರೆ. ಇದೀಗ ಈ ಅಕ್ರಮ ವಲಸಿಗರನ್ನು ಭಾರತದಿಂದ ಹೊರದಬ್ಬಲು ಕೇಂದ್ರ ಸರ್ಕಾರ ಮುಂದಾಗಿದೆ. ದೆಹಲಿ ಲೆಪ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೆನಾ ಸೂಚನೆ ಬೆನ್ನಲ್ಲೇ ಪೊಲೀಸ್ ಪಡೆ ದೆಹಲಿಯಲ್ಲಿ ಸರ್ವೆ ನಡೆಸಲು ಮುಂದಾಗಿದೆ. ದೆಹಲಿ ಸ್ಲಂನಲ್ಲಿ ವಾಸಿಸುತ್ತಿದ್ದ 5 ಬಾಂಗ್ಲಾದೇಶ ಪ್ರಜೆಗಳ ಬಂಧಿಸಲಾಗಿದೆ.