ಕನ್ನಡದಲ್ಲಿ, ದೇವರ ಹೆಸರಲ್ಲಿ ಡಾ.ವೀರೆಂದ್ರ ಹೆಗ್ಗಡೆ ಪ್ರಮಾಣ ವಚನ ಸ್ವೀಕಾರ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಗುರುವಾರ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಹೌದು! ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆಯಾಗಿರುವ ಡಾ. ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ನವದೆಹಲಿ (ಜು.21): ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಗುರುವಾರ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಹೌದು! ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆಯಾಗಿರುವ ಡಾ. ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ, ವೀರೇಂದ್ರ ಹೆಗ್ಗಡೆ ಎಂಬ ಹೆಸರಿನ ನಾನು, ರಾಜ್ಯಸಭೆಯ ಸದಸ್ಯನಾಗಿ ನಾಮನಿರ್ದೇಶನ ಹೊಂದಿದವನಾಗಿ, ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನ ವಿಷಯದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಕೈಗೊಳ್ಳಲಿರುವ ಕಾರ್ಯಗಳನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ ಎಂದು ಪ್ರಮಾಣ ಮಾಡಿದರು.
ಏಷ್ಯಾನೆಟ್ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ
ಇನ್ನು ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರನ್ನ ಸೌಜನ್ಯಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅತ್ಯಂತ ಗೌರವಯುತವಾಗಿ ವೀರೇಂದ್ರ ಹೆಗ್ಗಡೆ ಅವರನ್ನ ಬರಮಾಡಿಕೊಂಡು ಸನ್ಮಾನಿಸಿ ಅಭಿನಂದಿಸಿದರು.ನಂತರ ವೀರೇಂದ್ರ ಹೆಗ್ಗಡೆ ಅವರನ್ನು ಕುರಿತು ನಮ್ಮ ಕರ್ನಾಟಕ ಹಾಗೂ ನಮ್ಮ ದೇಶದ ಹೆಮ್ಮೆಯಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಯಲ್ಲಿ ಕಾಣಲು ಸಿಕ್ಕ ಅವಕಾಶ ಅತ್ಯಂತ ಸಂತೋಷ ಉಂಟುಮಾಡಿದೆ ಎಂದು ಭೇಟಿ ವೇಳೆ ತಮ್ಮ ಧನ್ಯತಾಭಾವ ವ್ಯಕ್ತಪಡಿಸಿದ್ದಾರೆ. ಈ ಭೇಟಿಯ ವೇಳೆ ಕೇಂದ್ರ ಸಚಿವ ಪಿಯುಷ್ ಗೊಯಲ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.