Asianet Suvarna News Asianet Suvarna News

ನಾಯಿಯನ್ನು ಕಾರಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ಪಾಪಿ!

ವೈದ್ಯನೋರ್ವ ಶ್ವಾನವನ್ನು ಕಾರಿಗೆ ಕಟ್ಟಿ ಅಮಾನುಷವಾಗಿ ಎಳೆದೊಯ್ದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ವೈದ್ಯನ ವಿರುದ್ಧ ಸಾರ್ವಜನಿಕರು ವ್ಯಾಪಕವಾಗಿ ಆಕ್ರೋಶ ಹೊರ ಹಾಕಿದ್ದಾರೆ.


ವೈದ್ಯನೋರ್ವ ಶ್ವಾನವನ್ನು ಕಾರಿಗೆ ಕಟ್ಟಿ ಅಮಾನುಷವಾಗಿ ಎಳೆದೊಯ್ದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ವೈದ್ಯನ ವಿರುದ್ಧ ಸಾರ್ವಜನಿಕರು ವ್ಯಾಪಕವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಹೀಗೆ ಶ್ವಾನವನ್ನು ಎಳೆದೊಯ್ದಿದ್ದರಿಂದ ಶ್ವಾನದ ಕಾಲುಗಳು ಮುರಿತಕ್ಕೊಳಗಾಗಿವೆ ಎಂದು ತಿಳಿದು ಬಂದಿದೆ. ಇನ್ನು ಹೀಗೆ ಕೃತ್ಯವೆಸಗಿದ ವ್ಯಕ್ತಿ ರಾಜಸ್ತಾನದ ಸರ್ಕಾರಿ ಆಸ್ಪತ್ರೆಯ ಖ್ಯಾತ ಸರ್ಜನ್ ಎಂದು ತಿಳಿದು ಬಂದಿದೆ. 
 

Video Top Stories