Asianet Suvarna News Asianet Suvarna News

Droupadi Murmu: ಒಡಿಶಾ ಆದಿವಾಸಿ ಮಹಿಳೆ ಈಗ 'ಮಹಾಭಾರತ' ದ 15ನೇ ರಾಷ್ಟ್ರಪತಿ

President Droupadi Murmu: ರಾಷ್ಟ್ರಪತಿ ಚುನಾವಣೆಯಲ್ಲಿ ಬಹುಮತದಿಂದ ಜಯಭೇರಿ ಬಾರಿಸಿದ ದ್ರೌಪದಿ ಮುರ್ಮು 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ನವದೆಹಲಿ (ಜು. 27): ಇತ್ತೀಚೆಗಷ್ಟೇ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಭಾರಿ ಬಹುಮತದಿಂದ ಜಯಭೇರಿ ಬಾರಿಸಿದ ದ್ರೌಪದಿ ಮುರ್ಮು ಅವರು, ದೇಶದ 15ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. 64 ವರ್ಷದ ಇವರು ದೇಶದ ಮೊದಲ ಆದಿವಾಸಿ ರಾಷ್ಟ್ರಪತಿ, 2ನೇ ಮಹಿಳಾ ರಾಷ್ಟ್ರಪತಿ ಹಾಗೂ ಅತಿ ಕಿರಿಯ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಸ್ವಾತಂತ್ರ್ಯಾನಂತರ ಜನಿಸಿದ ವ್ಯಕ್ತಿಯೊಬ್ಬರು ದೇಶದ ರಾಷ್ಟ್ರಪತಿ ಆಗುತ್ತಿರುವುದು ಕೂಡ ಇದೇ ಮೊದಲು.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ಕೇಂದ್ರ ಸಚಿವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಯಭಾರಿಗಳು, ಸಂಸದರು, ಸೇನಾ ಮುಖ್ಯಸ್ಥರು ಹಾಗೂ ವಿವಿಧ ಗಣ್ಯರು ಪಾಲ್ಗೊಂಡಿದ್ದರು. 

ರಾಷ್ಟ್ರಪತಿ ಚುನಾವಣೆಯಲ್ಲಿ ಇತಿಹಾಸ ಬರೆದ ದ್ರೌಪದಿ ಮುರ್ಮು, ಆದಿವಾಸಿ ಮಹಿಳೆಗೆ ಅತ್ಯುನ್ನತ ಪದವಿ!

ದ್ರೌಪದಿ ಮುರ್ಮು ಅವರು ಇತ್ತೀಚೆಗೆ ಸಂಪನ್ನಗೊಂಡ ರಾಷ್ಟ್ರಪತಿ ಚುನಾವಣೆಯಲ್ಲಿ ಶೇ.64ರಷ್ಟುಮತಗಳನ್ನು ಪಡೆದು, ವಿಪಕ್ಷಗಳ ಅಭ್ಯರ್ಥಿ ಯಶವಂತ ಸಿನ್ಹಾ ಅವರನ್ನು ಸುಲಭವಾಗಿ ಮಣಿಸಿದ್ದರು. ದ್ರೌಪದಿ ಅವರಿಗೆ 6,76,803 ಮತ ಹಾಗೂ ಸಿನ್ಹಾ ಅವರಿಗೆ 3,80,177 ಮತ ಬಿದ್ದಿದ್ದವು.

Video Top Stories