ಪಂಚರಾಜ್ಯ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್! ಲೋಕಸಭಾ ಎಲೆಕ್ಷನ್ ಮೇಲೆ ಪರಿಣಾಮ ಬೀರುತ್ತಾ?
ಪಂಚರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಇಂದು ಸುದ್ದಿಗೋಷ್ಠಿ ನಡೆಸಲಿದೆ. ಇಂದು ಚುನಾವಣಾ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
ವರ್ಷಾಂತ್ಯಕ್ಕೆ ನಡೆಯಲಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಗಳಿಗೆ(Assembly election) ಈಗಿನಿಂದಲೇ ಎಲ್ಲಾ ಪಕ್ಷಗಳು ತಯಾರಿ ಆರಂಭಿಸಿವೆ. ಇನ್ನೂ ಪಂಚರಾಜ್ಯ ಚುನಾವಣೆಗೆ(Election) ಇಂದೇ ಮುಹೂರ್ತ ಫಿಕ್ಸ್ ಆಗುವ ಸಾಧ್ಯತೆ ಇದೆ. ಇಂದು ಈ ವಿಷಯವಾಗಿ ಕೇಂದ್ರ ಚುನಾವಣಾ ಆಯೋಗ ಸುದ್ದಿಘೋಷ್ಠಿ ನಡೆಸಲಿದೆ. ರಾಜಸ್ಥಾನ, ಛತ್ತೀಸ್‌ಗಡ್, ತೆಲಂಗಾಣ, ಮಿಜೋರಾಂ, ಮಧ್ಯಪ್ರದೇಶದಲ್ಲಿ ಚುನಾವಣೆ ನಡೆಯಲಿದೆ. ಈ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಛತ್ತೀಸ್‌ಗಡದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಇದನ್ನೂ ವೀಕ್ಷಿಸಿ: ಗೋ ಶಾಲೆ ನಿರ್ವಹಣೆಗಿಲ್ಲ ಸರ್ಕಾರದ ಅನುದಾನ! ಬರದ ನಡುವೆ ಗೋಪಾಲಕರ ಗೋಳು ಕೇಳೋರಿಲ್ಲ