Asianet Suvarna News Asianet Suvarna News

ರಾಷ್ಟ್ರಪತಿ ಚುನಾವಣೆಯಲ್ಲಿ ಇತಿಹಾಸ ಬರೆದ ದ್ರೌಪದಿ ಮುರ್ಮು, ಆದಿವಾಸಿ ಮಹಿಳೆಗೆ ಅತ್ಯುನ್ನತ ಪದವಿ!

15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಹೊಸ ಇತಿಹಾಸ ರಚಿಸಿದ್ದಾರೆ. ಚುನಾವಣೆಯಲ್ಲಿ ಮುರ್ಮು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇತ್ತ ಕಾಂಗ್ರೆಸ್ ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಭಾರಿ ಪ್ರತಿಭಟನೆ ನೆಡೆಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ರಾಷ್ಟ್ರಪತಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಭಾರತದಲ್ಲಿ ಇದೇ ಮೊದಲ ಬಾರಿಗ ಆದಿವಾಸಿ ಮಹಿಳೆ ದೇಶದ ಅತ್ಯುನ್ನತ ಸ್ಥಾನಕ್ಕೇರಿದ ಸಾಧನೆಯನ್ನು ಮುರ್ಮು ಮಾಡಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ದ್ರೌಪದಿ ಮುರ್ಮು ಗೆಲುವು ಖಚಿತವಾದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ಮುರ್ಮು ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ. ಮುರ್ಮುಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ವಿರೋಧ ಪಕ್ಷಗಳ ನಾಯಕರು ಕೂಡ ಮುರ್ಮುಗೆ ಮತ ಹಾಕಿದ್ದಾರೆ. ಇದು ಐತಿಹಾಸಿಕ ಗೆಲುವು ಎಂದು ಬೊಮ್ಮಾಯಿ ಹೇಳಿದ್ದಾರೆ. ಇನ್ನು ಸೋನಿಯಾ ಗಾಂಧಿ ಇಡಿ ಪ್ರತಿಭಟನೆ, ರಮೇಶ್ ಕುಮಾರ್ ಋಣಸಂದಾಯ ಹೇಳಿಕೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Video Top Stories