ಬಗೆಹರಿಯದ ಕೃಷಿ ಕಾಯ್ದೆ ಕಗ್ಗಂಟು : ಡಿ. 08 ಕ್ಕೆ ಭಾರತ್ ಬಂದ್‌ಗೆ ರೈತ ಸಂಘಟನೆಗಳ ಕರೆ

3 ಕೃಷಿ ಕಾಯ್ದೆ ರದ್ಧತಿಗೆ ಆಗ್ರಹಿಸಿ 10 ದಿನಗಳಿಂದ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತಾರ್ಕಿಕ ಅಂತ್ಯ ಕಾಣುವ ಲಕ್ಷಣಗಳೇ ಕಾಣಿಸುತ್ತಿಲ್ಲ. ರೈತರು ಹಾಗೂ ಸರ್ಕಾರದ ನಡುವಿನ 5 ನೇ ಸುತ್ತಿನ ಮಾತುಕತೆ ವಿಫಲವಾಗಿದೆ. ಡಿ. 9 ಕ್ಕೆ ಮತ್ತೊಮ್ಮೆ ಸಭೆ ಸೇರಲು ನಿರ್ಧರಿಸಲಾಗಿದೆ. 

First Published Dec 6, 2020, 10:17 AM IST | Last Updated Dec 6, 2020, 10:20 AM IST

ನವದೆಹಲಿ (ಡಿ. 06): 3 ಕೃಷಿ ಕಾಯ್ದೆ ರದ್ಧತಿಗೆ ಆಗ್ರಹಿಸಿ 10 ದಿನಗಳಿಂದ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತಾರ್ಕಿಕ ಅಂತ್ಯ ಕಾಣುವ ಲಕ್ಷಣಗಳೇ ಕಾಣಿಸುತ್ತಿಲ್ಲ. ರೈತರು ಹಾಗೂ ಸರ್ಕಾರದ ನಡುವಿನ 5 ನೇ ಸುತ್ತಿನ ಮಾತುಕತೆ ವಿಫಲವಾಗಿದೆ. ಡಿ. 9 ಕ್ಕೆ ಮತ್ತೊಮ್ಮೆ ಸಭೆ ಸೇರಲು ನಿರ್ಧರಿಸಲಾಗಿದೆ. 

ಕಾಂಗ್ರೆಸ್ ಖೆಡ್ಡಾದಲ್ಲಿ ಬೀಳಿಸಿ ಅಳಿಸಿ ಹಾಕಿದರು; ಮುರಿದ ಮೈತ್ರಿಯ ಅಸಲಿ ಕಾರಣ ಬಿಚ್ಚಿಟ್ಟ ಎಚ್‌ಡಿಕೆ

ಕೇಂದ್ರ ಸರ್ಕಾರದ ವಿರುದ್ಧ ಡಿ. 8 ರಂದು ಭಾರತ್ ಬಂದ್ ನಡೆಸುವುದಾಗಿ ರೈತ ಸಂಘಟನೆಗಳು ಎಚ್ಚರಿಸಿವೆ. ರೈತರು ಕರೆ ನೀಡಿರುವ ಬಂದ್‌ ಬೆಂಬಲಿಸುವುದಾಗಿ ವಿವಿಧ ಕಾರ್ಮಿಕ ಸಂಘಟನೆಗಳು ಘೋಷಿಸಿವೆ.