ಗಣತಂತ್ರದಂದು ರಾಷ್ಟ್ರ ರಾಜಧಾನಿಯಲ್ಲಿ ಅನ್ನದಾತನ ಕಿಚ್ಚ: ರೈತನ ಕೋಪಕ್ಕೆ ಪೊಲಿಸರು ತತ್ತರ!

ಗಣರಾಜ್ಯೋತ್ಸವ ದಿನದ ಪರೇಡ್ ಮುಗಿಯುವ ಮುನ್ನವೇ ದೆಹಲಿಯೊಳಗೆ ಟ್ರಾಕ್ಟರ್ ಮೆರವಣಿಗೆ ನಡೆಸಲು ಪ್ರಯತ್ನಿಸಿದ ರೈತ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ, ತಳ್ಳಾಟ ನಡೆದಿದೆ.

Share this Video
  • FB
  • Linkdin
  • Whatsapp

ನವದೆಹಲಿ(ಜ. 26): ಗಣರಾಜ್ಯೋತ್ಸವ ದಿನದ ಪರೇಡ್ ಮುಗಿಯುವ ಮುನ್ನವೇ ದೆಹಲಿಯೊಳಗೆ ಟ್ರಾಕ್ಟರ್ ಮೆರವಣಿಗೆ ನಡೆಸಲು ಪ್ರಯತ್ನಿಸಿದ ರೈತ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ವಾಗ್ವಾದ, ತಳ್ಳಾಟ ನಡೆದಿದೆ. ಪೊಲೀಸರು ಹಾಕಿದ ಬ್ಯಾರಿಕೇಡ್​ಗಳನ್ನ ಬೀಳಿಸಿ ಪ್ರತಿಭಟನಾಕಾರರು ನಗರದೊಳಗೆ ಪ್ರವೇಶ ಮಾಡಲು ಯತ್ನಿಸಿದರು.

ಇವರನ್ನು ನಿಯಂತ್ರಿಸಲು ಪೊಲೀಸರು ಆಶ್ರುವಾಯು ಮತ್ತು ಲಾಠಿ ಚಾರ್ಜ್ ಪ್ರಯೋಗವನ್ನೂ ಮಾಡಬೇಕಾಯಿತು. ಆದರೂ ಪ್ರತಿಭಟನಾಕಾರರ ಸಹನೆಯ ಕಟ್ಟೆ ಒಡೆದಂತಿತ್ತು. ಸಿಂಘು, ಘಾಜಿಪುರ ಮತ್ತು ಟಿಕ್ರಿ ಗಡಿಭಾಗ ಅಕ್ಷರಶಃ ಪ್ರಕ್ಷುಬ್ದ ವಾತಾವರಣದಲ್ಲಿದ್ದಂತಿತ್ತು.

Related Video