Asianet Suvarna News Asianet Suvarna News

ಕೊರೋನಾಗೆ ಬಲಿಯಾದವರ ಕುಟುಂಬಕ್ಕೆ ಪರಿಹಾರ ನೀಡಿ: ಕೇಂದ್ರಕ್ಕೆ ಸುಪ್ರೀಂ ಆದೇಶ!

ಕೊರೋನಾಗೆ ಬಲಿಯಾದವರಿಗೆ ಪರಿಹಾರ ನೀಡಿ, ಪರಿಹಾರ ಮೊತ್ತವನ್ನು ಸುಪ್‌ರಿಂ ಕೋರ್ಟ್‌ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಯೂನಿಯನ್ ಆಫ್ ಇಂಡಿಯಾಗೆ ಆದೇಶ ಹೊರಡಿಸಿದೆ.

ನವದೆಹಲಿ(ಜೂ.30): ಕೊರೋನಾಗೆ ಬಲಿಯಾದವರಿಗೆ ಪರಿಹಾರ ನೀಡಿ, ಪರಿಹಾರ ಮೊತ್ತವನ್ನು ಸುಪ್‌ರಿಂ ಕೋರ್ಟ್‌ ನಿರ್ಧರಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ನೀಡಿದೆ. ಈ ಸಂಬಂಧ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಯೂನಿಯನ್ ಆಫ್ ಇಂಡಿಯಾಗೆ ಆದೇಶ ಹೊರಡಿಸಿದೆ.

ಉತ್ತರ ಕನ್ನಡ ಕುಗ್ರಾಮಗಳಿಗೆ ಲಸಿಕೆ ಪೂರೈಸಲು ಜಿಲ್ಲಾಡಳಿತದಿಂದ ಮಾಸ್ಟರ್ ಪ್ಲ್ಯಾನ್

ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ನೇತೃತ್ವದ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿ, ಕೋವಿಡ್-19 ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ನೀಡಬಹುದಾದ ಪರಿಹಾರದ ಮೊತ್ತವನ್ನು ಅಂದಾಜು ಮಾಡಿ 6 ವಾರಗಳೊಳಗೆ ನೀಡುವಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಆದೇಶ ನೀಡಿದೆ.

ಆಸ್ಟ್ರಾ, ಪೈಝರ್ ಲಸಿಕೆಗಳ ಮಿಶ್ರಣದಿಂದ ಹೆಚ್ಚುತ್ತೆ ಇಮ್ಯುನಿಟಿ, ಏನಿದು ಫಾರ್ಮುಲಾ..?

ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 12 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಡೆಯಿಂದ ಶಾಸನಬದ್ಧ ಬಾಧ್ಯತೆಯನ್ನು ಹೊಂದಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.ಅಂತಹ ಕನಿಷ್ಠ ಪರಿಹಾರವು ಸೆಕ್ಷನ್ 12 ರ ಪ್ರಕಾರ ಎಕ್ಸ್ ಗ್ರೇಷಿಯಾ ನೆರವನ್ನು ಒಳಗೊಂಡಿರುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.