ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ದರಗಳಲ್ಲಿ ಇಳಿಕೆ, ಜನಸಾಮಾನ್ಯರಿಗೆ ರಿಲೀಫ್ ಕೊಟ್ಟ ಕೇಂದ್ರ

ಹಣದುಬ್ಬರದಿಂದ (Inflation) ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದೆ. ಪಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮಹತ್ವದ ಘೋಷಣೆ ಮಾಡಿದೆ. 

Share this Video
  • FB
  • Linkdin
  • Whatsapp

ಹಣದುಬ್ಬರದಿಂದ (Inflation) ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಕೇಂದ್ರ ಸರ್ಕಾರ ರಿಲೀಫ್ ನೀಡಿದೆ. ಪಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಮಹತ್ವದ ಘೋಷಣೆ ಮಾಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೆಟ್ರೋಲ್‌ ಮೇಲೆ 8 ರು. ಮತ್ತು ಡೀಸೆಲ್‌ ಮೇಲೆ 6 ರು. ಅಬಕಾರಿ ಸುಂಕ ಕಡಿತ ಮಾಡಲಾಗಿದೆ. ಇದರಿಂದಾಗಿ, ಇತರ ತೆರಿಗೆ ದರಗಳು ಸೇರಿದಂತೆ ಪೆಟ್ರೋಲ್‌ ದರವು ದಿಲ್ಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಲೀಟರ್‌ಗೆ 9.5 ರು. ಮತ್ತು ಡೀಸೆಲ್‌ ದರ 7 ರು.ಗಳಷ್ಟು ಕಡಿಮೆಯಾಗಲಿದೆ. ಮೇ 22 ರಿಂದ ಪರಿಷ್ಕೃತ ದರಗಳು ಜಾರಿಗೆ ಬಂದಿವೆ.

ಜೊತೆಗೆ, ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯಡಿ ಎಲ್‌ಪಿಜಿ ಸಂಪರ್ಕ ಪಡೆದಿರುವ ಬಡ ಕುಟುಂಬಗಳ ಪ್ರತಿ ಸಿಲಿಂಡರ್‌ಗೆ 200 ರು. ಸಹಾಯಧನ (ಸಬ್ಸಿಡಿ) ಪ್ರಕಟಿಸಲಾಗಿದೆ. ಇದರಿಂದ ಬಡವರಿಗೆ ಇನ್ನು 1003 ರು. ಬದಲು ಸುಮಾರು 803 ರು. ದರದಲ್ಲಿ ಎಲ್‌ಪಿಜಿ ಲಭಿಸಲಿದೆ. ಕಬ್ಬಿಣ, ಉಕ್ಕು ಮತ್ತು ಪ್ಲಾಸ್ಟಿಕ್‌ ಮೇಲಿನ ಆಮದು ಸುಂಕವನ್ನು ಕಡಿತ ಮಾಡಲು ಕೇಂದ್ರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಮೆಂಟ್‌ ಬೆಲೆಯಲ್ಲೂ ಇಳಿಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಘೋಷಿಸಿದೆ.

Related Video