ಭಾರಿ ಮಳೆಗೆ ಗುಜರಾತ್‌ನಲ್ಲಿ ಪ್ರವಾಹ, ಶಾಲಾ ಕಾಲೇಜಿಗೆ ರಜೆ, 7 ಸಾವು!

  • ಗುಜರಾತ್ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರವಾಹ
  • 468 ಮಂದಿ ರಕ್ಷಣೆ, 9000 ಮಂದಿ ಸ್ಥಳಾಂತರ
  • ಗುಜರಾತ್‌ನಲ್ಲಿ ಪ್ರವಾಹ ಪರಿಸ್ಥಿತಿ
First Published Jul 12, 2022, 11:18 AM IST | Last Updated Jul 12, 2022, 11:18 AM IST

ಗುಜರಾತ್‌ನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ನದಿಗಳು ಅಪಾಯದ ಮಟ್ಟ ಮೀರಿದೆ. ಇದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಗುಜರಾತ್‌ನ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಪ್ರವಾಹದಿಂದ 7 ಮಂದಿ ಮೃತಪಟ್ಟಿದ್ದಾರೆ. ಮುನ್ನಚ್ಚೆರಿಕೆಯಾಗಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಮುಂದಿನ 5 ದಿನ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ನದಿ ಪಾತ್ರದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಮನೆಗಳು ಜಲಾವೃತಗೊಂಡಿದ್ದರೆ, ಜಾನುವಾರುಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಗುಜರಾತ್ ಪ್ರವಾಹ ಪರಿಸ್ಥಿತಿ ಸಂಪೂರ್ಣ ಚಿತ್ರಣ ಇಲ್ಲಿದೆ.