ಶಬರಿಮಲೆ ದೇಗುಲದಲ್ಲಿ ಭಕ್ತರ ನೂಕುನುಗ್ಗಲು, ಜನಸಂದಣಿ ನಿಯಂತ್ರಿಸಲು ಕೇರಳ ಸರ್ಕಾರ ವಿಫಲ

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ.

First Published Dec 13, 2023, 3:31 PM IST | Last Updated Dec 13, 2023, 3:31 PM IST

ಕೊಚ್ಚಿ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಈ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುತ್ತಿದ್ದು, ಭಕ್ತರ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ, ಕರ್ನಾಟಕ ಸೇರಿ ಹಲವು ರಾಜ್ಯಗಳ ಭಕ್ತರು ದೇವರ ದರ್ಶನ ಮಾಡದೇ ಮರಳುತ್ತಿರುವ ಘಟನೆಗಳು ವರದಿಯಾಗಿವೆ. 

ಅದರ ನಡುವೆಯೇ ನೀಲಕ್ಕಲ್‌ನಲ್ಲಿ ತಂದೆಯಿಂದ ತಪ್ಪಿಸಿಕೊಂಡ ಪುಟ್ಟ ಬಾಲಕನೊಬ್ಬ ವಾಹನದಲ್ಲಿ ತಂದೆಯನ್ನು ಹುಡುಕಿಕೊಡುವಂತೆ ಕಣ್ಣೀರೀಟ್ಟು ಕೈಮುಗಿದು ಬೇಡಿಕೊಳ್ಳುತ್ತಿರುವ ವಿಡಿಯೋವೊಂದು (viral Video) ಜಾಲತಾಣದಲ್ಲಿ ವೈರಲ್‌ ಆಗಿದೆ. ಬಾಲಕ ಕಣ್ಣೀರಿಟ್ಟ ಕೆಲ ಹೊತ್ತಿನಲ್ಲೇ ಆತನ ತಂದೆ ವಾಹನದ ಬಳಿ ಪುತ್ರನನ್ನು ಸಂತೈಸಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಜೊತೆಗೆ ಈ ವಿಡಿಯೋ, ಯಾತ್ರೆ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿರುವುದಕ್ಕೆ ಸಾಕ್ಷಿ ಎಂದು ವಿಪಕ್ಷಗಳು ಕಿಡಿಕಾರಿವೆ. ಹೈಕೋರ್ಟ್‌ ಕೂಡಾ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

Video Top Stories