ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭಾರೀ ಮಳೆ, ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ
- ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭರ್ಜರಿ ಮಳೆ
- ಕೃಷ್ಣಾ ನದಿಯಲ್ಲಿ 1.15 ಲಕ್ಷ ಕ್ಯುಸೆಕ್ ಹರಿವು
- ಉಕ್ಕಿದ ನದಿಗಳು: 3 ಜಿಲ್ಲೆಗಳಲ್ಲಿ ಕೃಷಿ ಭೂಮಿ ಜಲಾವೃತ
ಬೆಂಗಳೂರು (ಜೂ. 20): ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟಮತ್ತು ಬೆಳಗಾವಿಗಳಲ್ಲಿ ಮಳೆ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷ್ಣಾ, ಘಟಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು ನದಿ ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ ಎದುರಾಗಿದೆ.
ಭಾರಿ ಮಳೆಗೆ ಉತ್ತರಖಂಡದಲ್ಲಿ ಪ್ರವಾಹ ಭೀತಿ: ಮುಳುಗಡೆಯಾದ ರಿಷಿಕೇಶ್!
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಬಹುಭಾಗಗಳಲ್ಲೂ ಉತ್ತಮ ಮಳೆಯಾಗುತ್ತಿದ್ದು ಒಟ್ಟಾರೆ 20ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿವೆ. ಇನ್ನು ಬೇರೆ ರಾಜ್ಯಗಳ ವಿಚಾರಕ್ಕೆ ಬರುವುದಾದರೆ, ಝಾರ್ಖಂಡ್, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದೆ. ಬಹುತೇಕ ಪ್ರದೇಶಗಳು ಮುಳುಗಡೆಯಾಗಿದೆ. ಎಲ್ಲೆಲ್ಲಿ ಹೇಗೇಗಿದೆ ಮಳೆಯ ಪರಿಸ್ಥಿತಿ..? ಇಲ್ಲಿದೆ ಒಂದು ರಿಪೋರ್ಟ್.