Rain: ತಿರುಪತಿಯಲ್ಲಿ ಮಹಾಪ್ರವಾಹ, ವೆಂಕಟರಮಣನಿಗೂ ತಪ್ಪಲಿಲ್ಲ ಸಂಕಟ!

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದಿಟ್ಟಿದೆ.  

First Published Nov 21, 2021, 4:49 PM IST | Last Updated Nov 21, 2021, 5:35 PM IST

ಬೆಂಗಳೂರು (ನ. 21): ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು (Depression)  ವಿಶ್ವದ ಅತ್ಯಂತ ಸಿರಿವಂತ ದೇವರಾದ ತಿರುಪತಿ ತಿಮ್ಮಪ್ಪನಿಗೂ (Tirupathi Thimmappa) ಸಂಕಷ್ಟ ತಂದಿಟ್ಟಿದೆ.  ದೇಗುಲ ನಗರದಲ್ಲಿ ಇಂಥ ಮಳೆ ಅನಾಹುತ ಘಟಿಸಿದ್ದು 1996 ಭೀಕರ ಪ್ರವಾಹದ ಬಳಿಕ ಇದೇ ಮೊದಲು ಎನ್ನಲಾಗುತ್ತಿದೆ. ತಿರುಪತಿ ಶ್ರೀ ವೆಂಕಟೇಶ್ವರ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ರಸ್ತೆಗಳನ್ನು ಅನಿರ್ದಿಷ್ಟಾವಧಿಗೆ ಬಂದ್‌ ಮಾಡಲಾಗಿದೆ.

Karnataka Rain : ಅಕಾಲಿಕ ಮಳೆಗೆ ಮನೆಗೆ ಬರಲಿಲ್ಲ ಬೆಳೆ, ರೈತ ಕಂಗಾಲು, ರಾಜ್ಯ ತತ್ತರ

ಇನ್ನು ತಿರುಮಲ ಬೆಟ್ಟದ ಬುಡದಲ್ಲಿರುವ ಕಪಿಲೇಶ್ವರ ಸ್ವಾಮಿ ದೇಗುಲದ ಬಳಿ ಬೆಟ್ಟದ ಮೇಲಿನಿಂದ ಮಳೆ ನೀರು ಜಲಪಾತದ ರೀತಿಯಲ್ಲಿ ಧುಮ್ಮಿಕ್ಕುತ್ತಿರುವ ದೃಶ್ಯಗಳು ಮೈ ಜುಮ್ಮೆನಿಸುತ್ತಿವೆ. ನಗರದ ಹೊರವಲಯದಲ್ಲಿ ಹರಿಯುವ ಸ್ವರ್ಣಮುಖಿ ನದಿಯಲ್ಲಿ ನೀರಿನ ಮಟ್ಟಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಅಕ್ಕಪಕ್ಕದ ಹಳ್ಳಿಗಳ ಜನವಸತಿ ಪ್ರದೇಶಗಳಿಗೆ ನುಗ್ಗಿದೆ. ಪರಿಣಾಮ ಹಲವು ಹಳ್ಳಿಗಳಲ್ಲಿ ಸೊಂಟದ ಮಟ್ಟದವರೆಗೂ ನೀರು ತುಂಬಿದ್ದು ಜನರಲ್ಲಿ ಆತಂಕ ಮೂಡಿಸಿದೆ.