ಪಟ್ಟು ಬಿಡದ ರೈತರು, ಹಠ ಬಿಡದ ಸರ್ಕಾರ : ಅನ್ನದಾತರ ಆಕ್ರೋಶದಿಂದ ದೆಹಲಿ ಅಲ್ಲೋಲ ಕಲ್ಲೋಲ

ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ದಿಲ್ಲಿ ಗಡಿಯಲ್ಲಿನ ರಸ್ತೆಗಳಲ್ಲಿ ಬೀಡು ಬಿಟ್ಟು 3 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. 

First Published Dec 1, 2020, 12:11 PM IST | Last Updated Dec 1, 2020, 12:11 PM IST

ಬೆಂಗಳೂರು ಡಿ. 01): ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿಗೊಳಿಸಿದ ಕೃಷಿ ಸಂಬಂಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ದಿಲ್ಲಿ ಗಡಿಯಲ್ಲಿನ ರಸ್ತೆಗಳಲ್ಲಿ ಬೀಡು ಬಿಟ್ಟು 3 ದಿನಗಳಿಂದ ಪಂಜಾಬ್, ಹರ್ಯಾಣ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. 

ಕುರುಡ ನಾಯಿಗೆ ಅಣ್ಣನ ಪ್ರೀತಿ, ಅಮೆರಿಕದಲ್ಲಿ ನಿಗೂಢ ಏಕಶಿಲೆ ಪತ್ತೆ

‘ಷರತ್ತಿನ ಮಾತುಕತೆ’ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿದ್ದ ಆಹ್ವಾನ ತಿರಸ್ಕರಿಸಿದ್ದಾರೆ. ‘ಸರ್ಕಾರದ ಯಾವುದೇ ಷರತ್ತನ್ನು ನಾವು ಒಪ್ಪಿಕೊಳ್ಳುವುದಿಲ್ಲ. ಬೇಷರತ್ತಾಗಿ ಮಾತುಕತೆಗೆ ಕರೆದರೆ ಮಾತ್ರ ಹೋಗುತ್ತೇವೆ’ ಎಂದಿದ್ದಾರೆ.  ಇದರಿಂದಾಗಿ ಕೇಂದ್ರ ಸರ್ಕಾರ ಹಾಗೂ ರೈತರ ನಡುವಿನ ಬಿಕ್ಕಟ್ಟು ಮುಂದುವರಿದಂತಾಗಿದೆ.