ಚಲೋ ಕೆಲ್ಸ ಮಾಡ್ಯಾನ: ವಿಶ್ವನಾಥ್ ಕುಟುಂಬಸ್ಥರ ವ್ಯಾಖ್ಯಾನ!
ದಿಶಾ ಹತ್ಯಾಚಾರ ಆರೋಪಿಗಳನ್ನು ನರಕಕ್ಕೆ ಕಳುಹಿಸಿದ ಪೊಲೀಸರು| ಪೊಲೀಸ್ ಎನ್‌ಕೌಂಟರ್‌ನಲ್ಲಿ ದಿಶಾ ಹತ್ಯಾಚಾರ ಆರೋಪಿಗಳು ಫಿನಿಷ್| ಪೊಲೀಸ್ ಕಾರ್ಯಾಚರಣೆಗೆ ದೇಶಾದ್ಯಂತ ಸಂಭ್ರಮಾಚರಣೆ| ಹತ್ಯಾಚಾರ ಆರೋಪಿಗಳನ್ನು ಕೊಂದ ಪೊಲೀಸರಿಗೆ ಧನ್ಯವಾದಗಳ ಮಹಾಪೂರ| ಸುವರ್ಣನ್ಯೂಸ್‌ಗೆ ವಿಶ್ವನಾಥ್ ಸಜ್ಜನರ್ ಕುಟುಂಬದ ರಿಯಾಕ್ಷನ್|
ಹುಬ್ಬಳ್ಳಿ(ಡಿ.06): ದಿಶಾ ಹತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿರುವ ತೆಲಂಗಾಣ ಪೊಲೀಸರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ರಾಕ್ಷಸರನ್ನು ನರಕಕ್ಕೆ ಕಳುಹಿಸಿದ ಪೊಲೀಸರಿಗೆ ಧನ್ಯವಾದಗಳ ಸುರಿಮಳೆಯೇ ಆಗುತ್ತಿದೆ. ಅದರಂತೆ ಎನ್‌ಕೌಂಟರ್ ನೇತೃತ್ವದ ವಹಿಸಿದ್ದ ಸೈಬರಾಬಾದ್ ಪೊಲೀಸ್ ಆಯುಕ್ತ, ಕನ್ನಡಿಗ ವಿಶ್ವನಾಥ್ ಸಜ್ಜನರ್ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಹತ್ಯಾಚಾರಿಗಳನ್ನು ಎನ್‌ಕೌಂಟರ್ ಮಾಡಿ ವಿಶ್ವನಾಥ್ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಕುಟುಂಬಸ್ಥರು ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಸುವರ್ಣನ್ಯೂಸ್ ಜೊತೆ ಎಕ್ಸಕ್ಲೂಸಿವ್ ಆಗಿ ಮಾತನಾಡಿರುವ ವಿಶ್ವನಾಥ್ ಸಜ್ಜನರ್ ಕುಟುಂಬ, ಐಪಿಎಸ್ ಅಧಿಕಾರಿಯ ಬಾಲ್ಯದ ದಿನಗಳನ್ನು ನೆನೆದಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...