Asianet Suvarna News Asianet Suvarna News

News Hour: ಜೆ. ಪಿ ನಡ್ಡಾ ರಾಜೀನಾಮೆ, ಯಾರಾಗ್ತಾರೆ ಬಿಜೆಪಿ ರಾಷ್ಟ್ರಾಧ್ಯಕ್ಷ..?

bjp president probables ಕೇಂದ್ರದಲ್ಲಿ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆಪಿ ನಡ್ಡಾ, ಪಕ್ಷದ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲಿಯೇ ಬಿಜೆಪಿಯ ಮುಂದಿನ ರಾಷ್ಟ್ರಾಧ್ಯಕ್ಷ ಯಾರಾಗಲಿದ್ದಾರೆ ಎನ್ನುವ ಕುತೂಹಲ ಎದುರಾಗಿದೆ.

ಬೆಂಗಳೂರು (ಜೂ.10): ಮೋದಿ ಕ್ಯಾಬಿನೆಟ್‌ನಲ್ಲಿ ಆರೋಗ್ಯ ಸಚಿವರಾಗಿರುವ ಜೆಪಿ ನಡ್ಡಾ, ಬಿಜೆಪಿಯ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ನಡುವೆ ಬಿಜೆಪಿಯ ಮುಂದಿನ ರಾಷ್ಟ್ರಾಧ್ಯಕ್ಷ ರೇಸ್‌ಗೆ ಸಾಕಷ್ಟು ಹೆಸರುಗಳು ಕೇಳಿಬಂದಿದೆ.

ಈ ತಿಂಗಳ ಕೊನೆಯಲ್ಲಿ ಬಿಜೆಪಿ ಹೊಸ ರಾಷ್ಟ್ರಾಧ್ಯಕ್ಷರ ಆಯ್ಕೆ ಮಾಡುವ ಸಾಧ್ಯತೆ ಇದೆ. ಬಿಜೆಪಿ ಅಧ್ಯಕ್ಷ ಹುದ್ದೆ ರೇಸ್​ನಲ್ಲಿ ಐವರು ಹಿರಿಯ ನಾಯಕರಿದ್ದಾರೆ. ಸುನಿಲ್ ಬನ್ಸಾಲ್, ವಿನೋದ್ ತಾವ್ಡೆ, ಮಾಜಿ ಸ್ಪೀಕರ್ ಓಂ ಬಿರ್ಲಾ ಓಂ ಮಾಥುರ್, ಅನುರಾಗ್ ಟಾಕೂರ್ ಹೆಸರುಗಳು ಚರ್ಚೆ ಆಗುತ್ತಿದೆ.

ಈ ಐವರೂ ಕೂಡ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಇನ್ನು ವಿನೋದ್‌ ತಾವ್ಡೆ ಪ್ರಸ್ತುತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ. ಸುನಿಲ್‌ ಬನ್ಸಾಲ್‌ ಕೂಡ ಈ ಸ್ಥಾನಕ್ಕೆ ಫೇವರಿಟ್ ಆಗಿದ್ದಾರೆ.

Video Top Stories