ಮಂಡ್ಯದ ಮಗಳು ಜ| ನಾಗರತ್ನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ!
ಸಕ್ಕರೆ ನಾಡು ಮಂಡ್ಯ ಒಂದೊಲ್ಲೊಂದು ವಿಷಯದಲ್ಲಿ ಸದಾ ಸದ್ದು ಮಾಡುತ್ತಲೇ ಇರುತ್ತದೆ. ಕಲೆ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಇದೀಗ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವ್ರ ಮೂಲಕ ನ್ಯಾಯಾಂಗ ಕ್ಷೇತ್ರದಲ್ಲೂ ಸದ್ದು ಮಾಡುತ್ತಿದೆ.
ಮಂಡ್ಯ(ಆ.31): ಸಕ್ಕರೆ ನಾಡು ಮಂಡ್ಯ ಒಂದೊಲ್ಲೊಂದು ವಿಷಯದಲ್ಲಿ ಸದಾ ಸದ್ದು ಮಾಡುತ್ತಲೇ ಇರುತ್ತದೆ. ಕಲೆ, ಸಾಹಿತ್ಯ, ಸಿನಿಮಾ, ರಾಜಕೀಯ ಸೇರಿದಂತೆ ಹತ್ತಾರು ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ್ದು, ಇದೀಗ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವ್ರ ಮೂಲಕ ನ್ಯಾಯಾಂಗ ಕ್ಷೇತ್ರದಲ್ಲೂ ಸದ್ದು ಮಾಡುತ್ತಿದೆ.
ಹೌದು, ಮೊನ್ನೆಯಷ್ಟೇ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡ ಬಿ.ವಿ.ನಾಗರತ್ನ ಅವ್ರು ಮೂಲತಃ ಮಂಡ್ಯದವರು. ಪಾಂಡವಪರ ತಾಲೂಕಿನ ಇಂಗಲಗುಪ್ಪೆ ಗ್ರಾಮದವರಾದ ನಾಗರತ್ನ ಅವ್ರ ತಂದೆ ಇ.ಎಸ್.ವೆಂಕಟರಾಮಯ್ಯ ಕೂಡಾ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಈಗ ಮಗಳು ಕೂಡ ಸುಪ್ರೀಂ ಕೋರ್ಟ್ ಜಡ್ಜ್ ಆಗುವ ಮೂಲಕ ತಂದೆ, ಮಗಳು ಇಬ್ಬರೂ ಸರ್ವೋಚ್ಛ ನ್ಯಾಯಾಲಯದಲ್ಲಿ ಹುದ್ದೆ ಅಲಂಕರಿಸಿದ ಕೀರ್ತಿಗೆ ಪಾತ್ರವಾಗಿದ್ದಾರೆ.
ನ್ಯಾಯಮೂರ್ತಿ ನಾಗರತ್ನ ಅವ್ರ ಪದೋನ್ನತಿ ಮೂಲಕ ಸಕ್ಕರೆ ನಾಡಿನ ಹಿರಿಮೆ ಮತ್ತಷ್ಟು ಹೆಚ್ಚಾಗಿದೆ. ಕೆಲವೇ ವರ್ಷದಲ್ಲಿ ತಂದೆ-ಮಗಳು ಸಿಜೆಐ ಹುದ್ದೆಗೇರಿದ ಇತಿಹಾಸ ನಿರ್ಮಾಣವಾಗಲಿದ್ದು, ಅದರೊಂದಿಗೆ ದೇಶದ ಮೊದಲ ಮಹಿಳಾ ಸಿಜೆಐ ನೀಡಿದ ಜಿಲ್ಲೆ ಎಂಬ ಕೀರ್ತಿ ಮಂಡ್ಯದ್ದಾಗಲಿದೆ. ನಾಗರತ್ನ ಅವರ ಕುರಿತಾದ ಮತ್ತಷ್ಟು ವಿವರ ಇಲ್ಲಿದೆ ನೋಡಿ