
ಜನಸ್ಪಂದನ ಮೂಲಕ ಬಿಜೆಪಿ ಚುನಾವಣಾ ರಣಕಹಳೆ, ಹಳೆ ಮೈಸೂರು ಭಾಗ ತೆಕ್ಕೆಗೆ ಪಡೆಯಲು ಪ್ಲಾನ್!
ಬಿಜೆಪಿ ಜನಸ್ಪಂದನ ಕಾರ್ಯಕ್ರಮ ಲಂಚದ ಹಣದಲ್ಲಿ ಮಾಡಿದ್ದಾರೆ ಅನ್ನೋ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಬಿಜೆಪಿ ಕಾರ್ಯಕ್ರಮ, ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಕರಾವಳಿ, ಮಧ್ಯ ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ಬಿಜೆಪಿ ಅಬ್ಬರಿಸುತ್ತಿದೆ. ಆದರೆ ಹಳೇ ಮೈಸೂರು ಭಾಗದಲ್ಲಿ ಮಾತ್ರ ಬಿಜೆಪಿ ಇದುವರೆಗೆ ಅಬ್ಬರಿಸಿಲ್ಲ. ಹೀಗಾಗಿ ಬಿಜೆಪೆ ಅಳೆದು ತೂಗಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದೆ. ಇತ್ತ ಬಿಜೆಪಿ ಕಾರ್ಯಕರ್ತರ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಮುಂದೂಡಲಾಗಿತ್ತು. ಇಂದು ಆಯೋಜಿಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಪ್ರವೀಣ್ ನೆಟ್ಟಾರಿಗೆ ಶ್ರದ್ಧಾಂಜಲಿ ಅರ್ಪಿಸಿದ ಸಿಎಂ ಬೊಮ್ಮಾಯಿ, ನೆಟ್ಟಾರು ಕುಟುಂಬಕ್ಕೆ ಸರ್ಕಾರಿ ಕೆಲಸ ಘೋಷಿಸಿದ್ದಾರೆ.