ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ, ಸಮಾರಂಭಕ್ಕೆ ರಜನಿಕಾಂತ್ ಸೇರಿ ಹಲವು ಗಣ್ಯರು!
ಕನ್ನಡ ರಾಜ್ಯೋತ್ಸವದ ದಿನ ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ, ಗುಜರಾತ್ ಚುನಾವಣಾ ಸಮೀಕ್ಷಾ ವರದಿಯಲ್ಲಿ ಹಲವು ಅಚ್ಚರಿ, ಸಿದ್ದರಾಮಯ್ಯಗೆ ಕ್ಷೇತ್ರ ಗೊಂದಲ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಮರೆಯಾದ ಮಾಣಿಕ್ಯ ಪುನೀತ್ ರಾಜ್‌ಕುಮಾರ್‌ಗೆ ನಾಳೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಿದೆ. ಪುನೀತ್ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್‌ಗೆ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. ಇದಕ್ಕಾಗಿ ರಾಜ್ಯ ಸರ್ಕಾರ ವಿಧಾನಸೌಧದ ಮೆಟ್ಟಿಲುಗಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂನಿಯರ್ ಎನ್‌ಟಿಆರ್ ಸೇರಿದಂತೆ ಹಲವು ಸಿನಿ ದಿಗ್ಗಜರು ಆಗಮಿಸುತ್ತಿದ್ದಾರೆ. ಕನ್ನಡ ರಾಜ್ಯೋತ್ಸವ ಸಂಭ್ರಮದ ದಿನ ಪುನೀತ್‌ಗೆ ವಿಶೇಷವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.