Asianet Suvarna News Asianet Suvarna News

ಡಿ.13ರಂದು ಸಂಸತ್‌ ಮೇಲೆ ದಾಳಿ, ಖಲಿಸ್ತಾನಿ ಉಗ್ರ ಪನ್ನು ಎಚ್ಚರಿಕೆ!

ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನು, ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದು, ದೇಶದ ಹೊಸ ಸಂಸತ್‌ ಭವನದ ಮೇಲೆ ದಾಳಿ ಮಾಡುವ ಎಚ್ಚರಿಕೆ ನೀಡಿದ್ದಾನೆ.
 

ನವದೆಹಲಿ (ಡಿ.6):  ಅಮೆರಿಕದಲ್ಲಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನು, ವಿಡಿಯೋವೊಂದರಲ್ಲಿ, ತನ್ನನ್ನು ಕೊಲ್ಲಲು ಭಾರತೀಯ ಏಜೆನ್ಸಿಗಳ ಸಂಚು ವಿಫಲವಾಗಿದೆ ಎಂದು ಹೇಳಿರುವ ಆತ, ಡಿಸೆಂಬರ್ 13 ಅಥವಾ ಅದಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. 

ವೀಡಿಯೋ ಬಹಿರಂಗವಾದ ನಂತರ ದೆಹಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. 2001 ರಲ್ಲಿ ಭಯೋತ್ಪಾದಕರು ಸಂಸತ್‌ ಮೇಲೆ ಇದೇ ದಿನ ದಾಳಿ ನಡೆಸಿದ್ದರು. ಈ ಬಾರಿ ಅದಕ್ಕೆ 22 ವರ್ಷ ವಾಗಲಿದೆ. 2001 ರ ಸಂಸತ್ ದಾಳಿಯ ಅಪರಾಧಿ ಅಫ್ಜಲ್ ಗುರುವಿನ ಪೋಸ್ಟರ್ ಅನ್ನು ಒಳಗೊಂಡಿರುವ ವೀಡಿಯೊದಲ್ಲಿ 'ದೆಹಲಿ ಬನೇಗಾ ಖಲಿಸ್ತಾನ್' (ದೆಹಲಿ ಖಲಿಸ್ತಾನ್ ಆಗಿ ಬದಲಾಗುತ್ತದೆ) ಎಂಬ ಶೀರ್ಷಿಕೆಯೊಂದಿಗೆ ಪನ್ನು ,  ಭಾರತೀಯ ಏಜೆನ್ಸಿಗಳು ತನ್ನನ್ನು ಕೊಲ್ಲುವ ಸಂಚು ವಿಫಲವಾಗಿದೆ ಎಂದು ಹೇಳಿದ್ದಾರೆ.

ಹಮಾಸ್‌ ರೀತಿಯಲ್ಲೇ ಭಾರತದ ಮೇಲೆ ದಾಳಿ ಮಾಡ್ತೇವೆ, ಖಲಿಸ್ತಾನಿ ನಾಯಕ ಗುರುಪತ್ವಂತ್‌ ಪನ್ನು ಎಚ್ಚರಿಕೆ!

ಡಿಸೆಂಬರ್ 13 ಅಥವಾ ಅದಕ್ಕೂ ಮೊದಲು ಸಂಸತ್ತಿನ ಮೇಲೆ ದಾಳಿ ಮಾಡುವ ಮೂಲಕ ಪ್ರತಿಕ್ರಿಯಿಸುವುದಾಗಿ ಎಚ್ಚರಿಕೆ ನೀಡಿದ್ದಾನೆ. ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ ಪನ್ನು ಬೆದರಿಕೆ ಬಂದಿದೆ. ಡಿಸೆಂಬರ್ 22ರವರೆಗೆ ಅಧಿವೇಶನ ನಡೆಯಲಿದೆ.

Video Top Stories