ಅತಿ ಶೀಘ್ರದಲ್ಲೇ ಕೊರೋನಾಗೆ ಮೇಡ್‌ ಇನ್ ಇಂಡಿಯಾ ಲಸಿಕೆ..?

ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ 'ಕೋವಿಡ್ 19 ಸೋಂಕಿಗೆ ಭಾರತದಲ್ಲಿ ಲಸಿಕೆ ತಯಾರಾಗುತ್ತಿದೆ. ಈ ವರ್ಷದಲ್ಲೇ ಔಷಧಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಕೆಲವು ಕಂಪನಿಗಳ ಸಹಾಯೋಗದಲ್ಲಿ ಮೇಡನ್ ಇಂಡಿಯಾ ಲಸಿಕೆ ರೆಡಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.27): ಇಡೀ ಜಗತ್ತನ್ನೇ ಹೈರಾಣಾಗಿಸಿರುವ ಕೊರೋನಾ ವೈರಸ್‌ಗೆ ಜಗತ್ತಿನ ನಾನಾ ರಾಷ್ಟ್ರಗಳು ಔಷಧಿ ಕಂಡುಹಿಡಿಯಲು ಹಗಲಿರುಳು ಶ್ರಮಿಸುತ್ತಿವೆ. ಹೀಗಿರುವಾಗಲೇ ಬೆಂಗಳೂರು ಮೂಲದ ಬಯೋಕಾನ್ ಸಂಸ್ಥೆಯಿಂದ ಆಶಾದಾಯಕ ಸುದ್ದಿಯೊಂದು ಹೊರಬಿದ್ದಿದೆ.

ಹೌದು, ಬಯೋಕಾನ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ 'ಕೋವಿಡ್ 19 ಸೋಂಕಿಗೆ ಭಾರತದಲ್ಲಿ ಲಸಿಕೆ ತಯಾರಾಗುತ್ತಿದೆ. ಈ ವರ್ಷದಲ್ಲೇ ಔಷಧಿ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಕೆಲವು ಕಂಪನಿಗಳ ಸಹಾಯೋಗದಲ್ಲಿ ಮೇಡನ್ ಇಂಡಿಯಾ ಲಸಿಕೆ ರೆಡಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಕೊರೋನಾ ಸೋಂಕಿನ ಲಸಿಕೆ ರೆಡಿಯಾದರೆ ಜನರಲ್ಲಿ ಆತ್ಮವಿಶ್ವಾಸ ಮೂಡಲಿದೆ. ಕೊರೋನಾ ಸೋಂಕಿಗೆ ಚಿಕಿತ್ಸೆ ಲಭ್ಯವಿದೆ ಎಂದು ಜನ ಮಾನಸದಲ್ಲಿ ನಂಬಿಕೆ ಬೇರೂರಿದರೆ ಆ ಬಳಿಕ ಸೋಂಕಿತರನ್ನು ನೋಡುವ ದೃಷ್ಟಿಕೋನವೇ ಬದಲಾಗುತ್ತದೆ ಎಂದು ಕಿರಣ್ ಮಜುಂದಾರ್ ಶಾ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಕೊರೋನಾ ಸೋಂಕಿತ..!

ಜಗತ್ತಿನಾದ್ಯಂತ ಸುಮಾರು 29 ಲಕ್ಷಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇನ್ನು 2 ಲಕ್ಷ ಜನ ಕೊರೋನಾ ಸೋಂಕಿನಿಂದ ಕೊನೆಯುಸಿರೆಳೆದಿದ್ದಾರೆ. ಇನ್ನು ಕೊರೋನಾ ಸೋಂಕು ಹರಡದಂತೆ ತಡೆಯಲು ಭಾರತದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಲಾಕ್‌ಡೌನ್ ಘೋಷಿಸಲಾಗಿದೆಯಾದರೂ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚುತ್ತಲೇ ಇರುವುದು ಸಾಕಷ್ಟು ಆತಂಕಕ್ಕೆ ಈಡು ಮಾಡಿದೆ. 

Related Video