ಬಿಜೆಪಿ-ಜೆಡಿಎಸ್ ನಡುವೆ ಸೀಟು ಹಂಚಿಕೆ, ಹಾವೇರಿ ಸ್ಥಾನಕ್ಕಾಗಿ ಶುರುವಾಯ್ತು ಪೈಪೋಟಿ!

ಕರ್ನಾಟಕದ 7 ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳು ಇವರೇ, ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ, 2 ಸ್ಥಾನ ನೀಡಲು ಪ್ರಸ್ತಾವನೆ, ಜಗದೀಶ್ ಶೆಟ್ಟರ್ -ಈಶ್ವರಪ್ಪ ಪುತ್ರನ ನಡುವೆ ಟಿಕೆಟ್‌ಗಾಗಿ ಪೈಪೋಟಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

Share this Video
  • FB
  • Linkdin
  • Whatsapp

ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಮಾತುಕತೆ ತೀವ್ರಗೊಂಡಿದೆ. ಜೆಡಿಎಸ್ ಮೂರು ಸ್ಥಾನ ಕೇಳಿದ್ದರೆ, ಬಿಜೆಪಿ 2 ಸೀಟು ನೀಡುವ ಪ್ರಸ್ತಾವನೆ ಮುಂದಿಟ್ಟಿದೆ. ಇತ್ತ ಪಕ್ಷಕ್ಕೆ ವಾಪಸ್ ಬಂದಿರುವ ಜಗದೀಶ್ ಶೆಟ್ಟರ್ ಧಾರವಾಡ ಅಥವಾ ಹಾವೇರಿ ಕ್ಷೇತ್ರದ ಟಿಕೆಟ್ ನೀಡಲು ಪ್ರಸ್ತಾವನೆ ಮುಂದಿಟ್ಟಿದ್ದಾರೆ. ಇದರ ನಡುವೆ ಈಶ್ವರಪ್ಪ ಪುತ್ರ ಕೂಡ ಹಾವೇರಿ ಕ್ಷೇತ್ರದ ಟಿಕೆಟ್ ಮೇಲೆ ಕಣ್ಣಿಟ್ಟಿದ್ದಾರೆ. ಇತ್ತ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. 39 ಕ್ಷೇತ್ರಗಳಿಗೆ ಕಾಂಗ್ರೆಸ್ ಪಟ್ಟಿ ಬಿಡುಗಡೆ ಮಾಡಿದೆ.ಇದರಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. ಸಂಪೂರ್ಣ ವಿವರ ಇಲ್ಲಿದೆ.

Related Video