Video 10.5 ಲಕ್ಷ ಮತಗಟ್ಟೆ, 55 ಲಕ್ಷ ಇವಿಎಂ: ಏ.19ರಿಂದ ಜೂ.1ರ ವರೆಗೆ ಲೋಕಸಭಾ ಚುನಾವಣೆ!
ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. 85 ವರ್ಷಕ್ಕಿಂತ ಹೆಚ್ಚಿನವರು ಹಾಗೂ ಶೇಕಡಾ 40 ರಷ್ಟು ಅಂಗವೈಕಲ್ಯದ ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗಿದೆ. ನ್ಯಾಯಸಮ್ಮತ ಚುನಾವಣೆಗೆ ಆಯೋಗ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಲೋಕಸಭಾ ಚುನಾವಣಾ ದಿನಾಂಕ ಮಾಹಿತಿ, ಬಿಜೆಪಿ ಟಿಕೆಟ್ ಗೊಂದಲ, ಈಶ್ವರಪ್ಪ ಬಂಡಾಯ ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಲೋಕಸಭಾ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಏಪ್ರಿಲ್ 19 ರಿಂದ ಜೂನ್ 1ರವರೆಗೆ 7 ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಘೋಷಣೆಯಾಗಲಿದೆ. ಕರ್ನಾಟಕದಲ್ಲಿ ಎಪ್ರಿಲ್ 26 ಹಾಗೂ ಮೇ7 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಈ ಬಾರಿಯ ಚುನಾವಣೆಗೆ 10.5 ಲಕ್ಷ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 1.5 ಕೋಟಿ ಅಧಿಕಾರಿಗಳು ನಿಯೋಜನೆಗೊಂಡಿದ್ದಾರೆ. ಬರೋಬ್ಬರಿ 55 ಲಕ್ಷ ಇವಿಎಂ ಯಂತ್ರಗಳ ಬಳಕೆಯಾಗಲಿದೆ. ಇನ್ನು ಚುನಾವಣೆಗಾಗಿ 4 ಲಕ್ಷ ವಾಹನಗಳನ್ನು ಕೇಂದ್ರ ಚುನಾವಣಾ ಆಯೋಗ ಬಳಸಿಕೊಳ್ಳಲಿದೆ. ಲೋಕಸಭಾ ಚುನಾವಣೆಯ ಸಂಪೂರ್ಣ ಮಾಹಿತಿ, ಬಿಜೆಪಿ ಟಿಕೆಟ್ ಆಕ್ರೋಶ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.