ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‌ಡೌನ್, ಜನವರಿ 31ರವರೆಗೆ ಎಲ್ಲವೂ ಸ್ತಬ್ಧ!
ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು, ಮಹಾರಾಷ್ಟ್ರ ಸರ್ಕಾರವು 2021 ಜನವರಿ 31 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ವಿಸ್ತರಿಸಿದೆ. ವೈರಸ್ ಹರಡುವುದು ಮಹಾರಾಷ್ಟ್ರ ರಾಜ್ಯಕ್ಕೆ ಅಪಾಯಕಾರಿಯಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
ಮುಂಬೈ(ಡಿ.30) ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು, ಮಹಾರಾಷ್ಟ್ರ ಸರ್ಕಾರವು 2021 ಜನವರಿ 31 ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ವಿಸ್ತರಿಸಿದೆ. ವೈರಸ್ ಹರಡುವುದು ಮಹಾರಾಷ್ಟ್ರ ರಾಜ್ಯಕ್ಕೆ ಅಪಾಯಕಾರಿಯಾಗಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.
ರಾಜ್ಯಕ್ಕೆ ಬ್ರಿಟನ್ ವೈರಸ್ ಎಂಟ್ರಿ; ನೈಟ್ ಕರ್ಫ್ಯೂ ಜಾರಿ ಸಾಧ್ಯತೆ..?
ವೈರಸ್ ಹರಡುವುದನ್ನು ತಡೆಯಲು ಕೆಲವು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಾಂಕ್ರಾಮಿಕ ಕಾಯ್ದೆ 1897 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಲಾಕ್‌ಡೌನ್ ಅನ್ನು ಜನವರಿ 31 ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ. ಕೋವಿಡ್ ಬಗ್ಗೆ ಪ್ರಸ್ತುತ ಇರುವ ಎಲ್ಲಾ ಮಾರ್ಗಸೂಚಿಗಳು ಮುಂದುವರಿಯಲಿವೆ ಎಂದು ತನ್ನ ಆದೇಶದಲ್ಲಿ ಸರ್ಕಾರ ತಿಳಿಸಿದೆ.