ಮಹಾಕುಂಭ ಕಾಲ್ತುಳಿತದಲ್ಲಿ ಸಾವಿರ ಸಾವು, ಖರ್ಗೆ ಆರೋಪ ವಾಪಸ್ ಪಡೆಯಲು ಉಪರಾಷ್ಟ್ರಪತಿ ಚಾಟಿ
ರಾಜ್ಯಸಭೆಯಲ್ಲಿ ಮಹಾಕುಂಭ ಕಾಲ್ತುಳಿತ ಪ್ರಕರಣ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಕಾಲ್ತುಳಿತದಲ್ಲಿ ಸಾವಿರ ಸಾವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪವನ್ನುಉಪರಾಷ್ಟ್ರಪತಿ ವಾಪಸ್ ಪಡೆಯಲು ಸೂಚಿಸಿದ್ದಾರೆ. ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ನವದೆಹಲಿ(ಫೆ.03) ಮಹಾಕುಂಭ ಮೇಳದಲ್ಲಿ ಇತ್ತೀಚೆಗೆ ಮೌನಿ ಅಮಾಸ್ಯೆಯಂದು ನಡೆದ ಕಾಲ್ತುಳಿತದಲ್ಲಿ 30 ಮಂದಿ ಮತಪಟ್ಟಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಇಂದು ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತ್ತು. ಮಲ್ಲಿಕಾರ್ಜುನ ಖರ್ಗೆ ಕಾಲ್ತುಳಿತ ಪ್ರಕರಣ ಪ್ರಸ್ತಾಪಿಸಿದ್ದಾರೆ. ಈ ವೇಳೆ ಈ ಘಟನೆಯಲ್ಲಿ ಒಂದು ಸಾವಿರ ಮಂದಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಜಟಾಪಟಿ ನಡುವೆ ಈ ಹೇಳಿಕೆ ವಾಪಸ್ ಪಡೆಯಲು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಚಾಟಿ ಬೀಸಿದ ಘಟನೆ ನೆಡೆದಿದೆ.