Asianet Suvarna News Asianet Suvarna News

ಇಂದು ಎಐಸಿಸಿ ಚುಕ್ಕಾಣಿ ಹಿಡಿದ ಮಲ್ಲಿಕಾರ್ಜುನ ಖರ್ಗೆ

ಇಂದು ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 

First Published Oct 26, 2022, 11:22 AM IST | Last Updated Oct 26, 2022, 11:40 AM IST

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. 24 ವರ್ಷಗಳ ಬಳಿಕ ಗಾಂಧಿ ಕುಟುಂಬದ ಸದಸ್ಯರ ಹೊರತಾದ ವ್ಯಕ್ತಿಯ ಕೈಗೆ ಪಕ್ಷದ ಅಧ್ಯಕ್ಷಗಿರಿ ಸಿಕ್ಕಿದೆ. 5 ದಶಕದ ಬಳಿಕ ಕನ್ನಡಿಗನಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ ಒಲಿದಿದೆ. ಇನ್ನು ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳಲು ಸಿದ್ದರಾಮಯ್ಯ ದೆಹಲಿಗೆ ಭೇಟಿ ನೀಡಿದ್ದು, ಖರ್ಗೆ ಅವರನ್ನ ಭೇಟಿಯಾಗಿ ಶುಭಾಶಯ ಕೋರಿದ್ದಾರೆ.

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಖರ್ಗೆ ಅಧಿಕಾರ ಸ್ವೀಕಾರ: ಗಾಂಧಿ ಸಮಾಧಿಗೆ ನಮಿಸಿದ ನಾಯಕ