ಗೋಮಾಂಸ ಸಾಗಣೆ ಆರೋಪ: ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು
- ಗೋಮಾಂಸ ಸಾಗಿಸುತ್ತಿದ್ದಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ವ್ಯಕ್ತಿ
- ಬಟ್ಟೆ ಬಿಚ್ಚಿಸಿ ಥಳಿಸಿದ ಗ್ರಾಮಸ್ಥರು
- ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಮಥುರಾ(ಮಾ.24): ವ್ಯಕ್ತಿಯೊಬ್ಬನನ್ನು ಹಿಡಿದು ಬಟ್ಟೆ ಕಳಚಿ ಗ್ರಾಮಸ್ಥರೆಲ್ಲಾ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಮಥುರಾದಲ್ಲಿ ನಡೆದಿದೆ. ಗೋಮಾಂಸ ಸಾಗಿಸುತ್ತಿದ್ದಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಆರೋಪಿಯನ್ನು ಗ್ರಾಮಸ್ಥರೆಲ್ಲಾ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆತ ಎಷ್ಟು ಬೇಡಿಕೊಂಡರು ಬಿಡದೆ ಆತನ ಬಟ್ಟೆಯನ್ನು ಕಳಚಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.