ಕೇರಳ ಅಸೆಂಬ್ಲೀಲಿ ಕನ್ನಡಲ್ಲಿ ಶಾಸಕ ಅಶ್ರಫ್‌ ಪ್ರಮಾಣ!

ಗಡಿನಾಡು ಕಾಸರಗೋಡು ಜಿಲ್ಲೆ ಮಂಜೇಶ್ವರ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ.ಅಶ್ರಫ್‌ ಅವರು ಕೇರಳ ವಿಧಾನಸಭೆಯಲ್ಲಿ ಸೋಮವಾರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ.

Share this Video
  • FB
  • Linkdin
  • Whatsapp

ಮಂಗಳೂರು(ಮೇ.25): ಗಡಿನಾಡು ಕಾಸರಗೋಡು ಜಿಲ್ಲೆ ಮಂಜೇಶ್ವರ ಕ್ಷೇತ್ರದ ನೂತನ ಶಾಸಕ ಎ.ಕೆ.ಎಂ.ಅಶ್ರಫ್‌ ಅವರು ಕೇರಳ ವಿಧಾನಸಭೆಯಲ್ಲಿ ಸೋಮವಾರ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದಿದ್ದಾರೆ. ಕಳೆದ ತಿಂಗಳು ನಡೆದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಶ್ರಫ್‌, ನಿಕಟಸ್ಪರ್ಧಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್‌ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಇನ್ನೊಂದು ಜನ್ಮವಿದ್ದರೆ ಕನ್ನಡಿಗನಾಗಿ ಹುಟ್ಟುತ್ತೇನೆಂದ ಎಸ್ಪಿಬಿ: ಅರ್ಚನಾ!

ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರ್ಕಾರಿ ಕಾಲೇಜಿನಲ್ಲಿ ಕನ್ನಡದಲ್ಲೇ ಬಿಎ ಪದವಿ ಪಡೆದಿರುವ ಅಶ್ರಫ್‌ ಕಾಲೇಜು ವಿದ್ಯಾರ್ಥಿ ಯೂನಿಯನ್‌ನಲ್ಲಿ ಸಕ್ರಿಯವಾಗಿದ್ದರು. ವಿದ್ಯಾರ್ಥಿ ದೆಸೆಯಲ್ಲಿಯೇ ಕನ್ನಡ ಸಾಂಸ್ಕೃತಿಕ, ಸಾಹಿತ್ಯಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ಪ್ರಮಾಣ ವಚನದಲ್ಲೂ ಕನ್ನಡದ ಭಾಷಾಭಿಮಾನ ಮೆರೆದಿರುವುದು ಗಮನಾರ್ಹ. ಅವರು ತುಳು, ಮಲಯಾಳಂ, ಉರ್ದು, ಇಂಗ್ಲಿಷ್‌ ಭಾಷೆಗಳನ್ನು ಸುಲಲಿತವಾಗಿ ಮಾತನಾಡಬಲ್ಲರು.

ವಾರಣಾಸಿಯಲ್ಲಿ ಕನ್ನಡದಲ್ಲಿ ಮೋದಿ ಮಾತು: ಸಿದ್ಧಾಂತ ಶಿಖಾಮಣಿ ಕೃತಿ ಬಿಡುಗಡೆ!

ಗಡಿನಾಡು ಮಂಜೇಶ್ವರವನ್ನು ಕನ್ನಡ ಭಾಷಾ ಅಲ್ಪಸಂಖ್ಯಾತ ಪ್ರದೇಶ ಎಂಬುದಾಗಿ ಕೇರಳ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲೂ ಅಶ್ರಫ್‌ ಅವರ ನಡೆಯ ಬಗ್ಗೆ ಗಡಿನಾಡ ಕನ್ನಡಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮಂಜೇಶ್ವರದ ಹಿಂದಿನ ಶಾಸಕ ಕಮರುದ್ದೀನ್‌ ಕೂಡ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ್ದರು. ಆ ಪರಂಪರೆಯನ್ನು ಇದೀಗ ಅಶ್ರಫ್‌ ಕೂಡ ಮುಂದುವರಿಸಿದ್ದಾರೆ.

Related Video