Asianet Suvarna News Asianet Suvarna News

ಮಾಜಿ ಪ್ರಧಾನಿ ಸಿಂಗ್‌ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದೆ ಭಾರತ!

Oct 16, 2021, 2:59 PM IST

ನವದೆಹಲಿ (ಅ. 16): ತೀವ್ರ ಅನಾರೋಗ್ಯ ಹಿನ್ನೆಲೆ ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ (89) (Manmohan Singh) ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ಸಿಂಗ್‌ಗೆ ಸೋಮವಾರದಿಂದ ಜ್ವರ ಕಾಣಿಸಿಕೊಂಡಿತ್ತು. ಬುಧವಾರ ಅವರ ಆರೋಗ್ಯ ಸುಧಾರಿಸುತ್ತಿರುವಾಗಲೇ ಬಲಹೀನತೆ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಏಮ್ಸ್‌ನ ಹೃದ್ರೋಗ ಘಟಕಕ್ಕೆ ದಾಖಲಿಸಲಾಗಿದೆ. ಇದೇ ವರ್ಷದ ಏಪ್ರಿಲ್‌ನಲ್ಲಿ ದೇಶಾದ್ಯಂತ ಕಾಣಿಸಿಕೊಂಡ ಕೋವಿಡ್‌ 2 ನೇ ಅಲೆಯ ವೇಳೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿದ್ದರು.

ಮಾಜಿ ಪಿಎಂ ಡಾ. ಸಿಂಗ್ ಅನಾರೋಗ್ಯ, ಬೇಗ ಗುಣಮುಖರಾಗಿ ಎಂದು ಹಾರೈಸಿದ ಮೋದಿ!

ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನ ಮಂತ್ರಿ ಡಾ.ಮನಮೋಹನ ಸಿಂಗ್‌ ಆರೋಗ್ಯ ಸ್ಥಿರವಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಏಮ್ಸ್‌ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.