Asianet Suvarna News Asianet Suvarna News

Mann Ki Baat ನಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆ ಮೋದಿ ಶ್ಲಾಘನೆ

ಇಂದಿನ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಭಿಯಾನದ ಬಗ್ಗೆ ಪ್ರಮುಖವಾಗಿ ಪ್ರಸ್ತಾಪಿಸಿದ ಮೋದಿ, ಈ ವೇಳೆ ಕರ್ನಾಟಕದಲ್ಲಿ ಆಯೋಜನೆಗೊಂಡ ‘ಅಮೃತ ಭಾರತಿ ಕನ್ನಡದ ಆರತಿ’ ಎಂಬ ವಿಶಿಷ್ಟ ಅಭಿಯಾನವನ್ನು ಶ್ಲಾಘಿಸಿದ್ದಾರೆ. 

ಪ್ರಧಾನಿ ಮೋದಿ ತಮ್ಮ ಮನ್‌ ಕೀ ಕಾರ್ಯಕ್ರಮದಲ್ಲಿ ಪ್ರಮುಖವಾಗಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಕನ್ನಡದ ಕಾರ್ಯಕ್ರಮವೊಂದನ್ನು ಸಹ ಶ್ಲಾಘಿಸಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕೆಲವು ವಾರಗಳ ಹಿಂದೆ ಈ ಅಭಿಯಾನವನ್ನು ಆರಂಭಿಸಲಾಗಿತ್ತು. ಕೆಲವು ವಾರಗಳ ಹಿಂದೆ ಕರ್ನಾಟಕದಲ್ಲಿ ‘ಅಮೃತ ಭಾರತಿ ಕನ್ನಡದ ಆರತಿ’ ಎಂಬ ವಿಶಿಷ್ಟ ಅಭಿಯಾನ ಆರಂಭಿಸಲಾಗಿತ್ತು. ಇದರಲ್ಲಿ ರಾಜ್ಯದ 75 ಸ್ಥಳಗಳಲ್ಲಿ ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ಸಂಬಂಧಿಸಿದ ಅದ್ಧೂರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಇಂದಿನ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಶ್ಲಾಘಿಸಿದ್ದಾರೆ. 
ಆಗಸ್ಟ್ 2 ರಿಂದ 15ರವರೆಗೆ ತಿರಂಗ ಬಾವುಟವನ್ನು ನಿಮ್ಮ ಪ್ರೊಫೈಲ್‌ ಫೋಟೋ ಮಾಡಿಕೊಳ್ಳಬಹುದು: ಮೋದಿ

ಈ ಅಭಿಯಾನದಲ್ಲಿ ರಾಜ್ಯದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಯ್ತು. ಇದರ ಜತೆಗೆ ಸ್ಥಳೀಯ ಸಾಹಿತ್ಯಿಕ ಸಾಧನೆಗಳ ಬಗ್ಗೆಯೂ ಈ ಅಭಿಯಾನದಲ್ಲಿ ಚರ್ಚಿಸಲಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ಹೇಳಿದರು.