Asianet Suvarna News Asianet Suvarna News

News Hour: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದ ಕೇಂದ್ರ ಸರ್ಕಾರ

ಲೋಕಸಭಾ ಚುನಾವಣೆ ಘೋಷಣೆಗೆ ಇನ್ನೇನು ಕೆಲವೇ ದಿನಗಳು ಇರುವಾಗ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ ಅಧಿಸೂಚನೆಯನ್ನು ಜಾರಿ ಮಾಡಿದೆ. ಸಂಸತ್ತಿನಲ್ಲಿ ಮಸೂದೆ ಅಂಗೀಕಾರವಾದ ನಾಲ್ಕು ವರ್ಷಗಳ ಬಳಿಕ ನಿಯಮ ಜಾರಿಗೆ ಬಂದಿದೆ.
 

ಬೆಂಗಳೂರು (ಮಾ.11): ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಇರುವಾಗ ಕೇಂದ್ರ ಸರ್ಕಾರ, ಬಹುನಿರೀಕ್ಷಿತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ. 2019ರಲ್ಲಿ ಇದು ಸಂಸತ್ತಿನಲ್ಲಿ ಅಂಗೀಕಾರವಾಗಿದ್ದರೂ, ಈ ಕುರಿತಾಗಿ ಅಧಿಸೂಚನೆ ಸೋಮವಾರ ಹೊರಬಿದ್ದಿದೆ.

ಇನ್ನೊಂದೆಡೆ, ದೆಹಲಿಯಲ್ಲಿ ಸಿಇಸಿ ಸಭೆಯಲ್ಲಿ ಭಾಗಿಯಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇನ್ನು ಒಂದೆರಡು ದಿನಗಳಲ್ಲಿ ಪಟ್ಟಿ ಅಂತಿಮವಾಗಲಿದೆ ಎಂದು ಹೇಳಿದ್ದಾರೆ. ಎಲ್ಲಾ 28 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಸೋಮವಾರ ಚರ್ಚೆಯಾಗಿದ್ದು, ಎರಡು ಹಂತದಲ್ಲಿ ಪಟ್ಟಿ ಬಿಡುಗಡೆಯಾಗಲಿದೆ ಎಂದಿದ್ದಾರೆ.

ಈ ನಡುವೆ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಸಂವಿಧಾನ ಬದಲಾವಣೆ ಕಿಚ್ಚು ಹೊತ್ತಿಸಿದ್ದಾರೆ. ಎನ್‌ಡಿಎ ಮುಂದಿನ ಚುನಾವಣೆಯಲ್ಲಿ 400ಕ್ಕೂ ಅಧಿಕ ಸೀಟ್‌ ಗೆದ್ದರೆ ಇದು ಸಾಧ್ಯವಾಗಲಿದೆ ಎಂದು ಹೇಳಿರುವುದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.